ಮಂಗಳೂರು ಉತ್ತರ ಕ್ಷೇತ್ರವನ್ನು ಅಭಿವೃದ್ಧಿಯ ಎತ್ತರಕ್ಕೇರಿಸುವೆ: ಇನಾಯತ್ ಅಲಿ

Prasthutha|

ಗುರುಪುರ: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ರವರು ಸೋಮವಾರದಂದು ಗುರುಪುರ ವಲಯ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ನಂತರ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

- Advertisement -

‘ಆರ್ಥಿಕ ಸಂಕಷ್ಟ, ಬಿಜೆಪಿಯ ದುರಾಡಳಿತದಿಂದ ತತ್ತಿರಿಸಿರುವ ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳನ್ನು ನೀಡಿದೆ. ಇಂದು ಜನರು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಗ್ಯಾರಂಟಿಯನ್ನು ನೀಡುತ್ತಿದ್ದಾರೆ. ವಿವಿಧ ಪಕ್ಷಗಳ ಮುಖಂಡರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ವಿಜಯ ಪತಾಕೆ ಹಾರಿಸಲಿದೆ ಎನ್ನುವುದರ ಸ್ಪಷ್ಟ ಮುನ್ಸೂಚನೆ ಇದು. ಕ್ಷೇತ್ರದಾದ್ಯಂತ ಸಂಚರಿಸಿ ಮತಯಾಚಿಸಿದ ಸಂದರ್ಭ ಮತದಾರರು ನೀಡಿದ ಬೆಂಬಲ ಅಪಾರ. ಜನರ ಭಾವನೆಗಳೊಂದಿಗೆ ಆಟವಾಡುವ ಬಿಜೆಪಿಯನ್ನು ಮತದಾರರು ತಿರಸ್ಕರಿಸುವುದು ನೂರಕ್ಕೆ ನೂರು ಸತ್ಯ. ಮಂಗಳೂರು ಉತ್ತರ ಕ್ಷೇತ್ರವನ್ನು ಅಭಿವೃದ್ಧಿಯ ಎತ್ತರಕ್ಕೇರಿಸುವ ಗ್ಯಾರಂಟಿ ನನ್ನದು’ ಎಂದು ಇನಾಯತ್ ಅಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.