ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ನಿಗದಿಪಡಿಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನು ಘೋಷಿಸಿದ್ದಾರೆ.
ಮಧ್ಯಪ್ರದೇಶ ಹಾಗೂ ಮಿಜೋರಾಂನಲ್ಲಿ ನವೆಂಬರ್ 7 ರಂದು ಮತದಾನ ನಡೆಯಲಿದೆ, ಛತ್ತೀಸ್ ಗಢದಲ್ಲಿ ನವೆಂಬರ್ 7 ಹಾಗೂ 17ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ, ರಾಜಸ್ಥಾನದಲ್ಲಿ ನವೆಂಬರ್ 23ರಂದು ಹಾಗೂ ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ನಡೆಯಲಿದೆ. ಡಿಸೆಂಬರ್ 3ಕ್ಕೆ ಫಲಿತಾಂಶ ಹೊರಬರಲಿದೆ.
ಈ ಬಾರಿ ಯಾವ ರಾಜ್ಯದಲ್ಲಿ ಎಷ್ಟು ಮತದಾರರಿದ್ದಾರೆ?
ಮಧ್ಯಪ್ರದೇಶ 5.6 ಕೋಟಿ ರಾಜಸ್ಥಾನ 5.25 ಕೋಟಿ ತೆಲಂಗಾಣ 3.17 ಕೋಟಿ ಛತ್ತೀಸ್‌ಗಢ 2.03 ಕೋಟಿ ಮಿಜೋರಾಂ 8.52 ಲಕ್ಷ