ನವದೆಹಲಿ: ‘ವಿಕಸಿತ ಭಾರತ’ಕ್ಕೆ ಸಂಬಂಧಿಸಿದಂತೆ ವಾಟ್ಸ್ಆ್ಯಪ್ ಮೂಲಕ ಹರಿದಾಡುತ್ತಿರುವ ಸಂದೇಶವನ್ನು ಕೂಡಲೇ ತಡೆಹಿಡಿಯಬೇಕು ಎಂದು ಚುನಾವಣಾ ಆಯೋಗವು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಗುರುವಾರ ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ಜನರಿಗೆ ವಾಟ್ಸಾಪ್ ನಲ್ಲಿ ವಿಕಸಿತ ಭಾರತಕ್ಕೆ ಸಂಬಂಧಿಸಿದ ಸಂದೇಶ ರವಾನೆಯಾಗುತ್ತಿದೆ. ಈ ಸಂದೇಶವು ನರೇಂದ್ರ ಮೋದಿ ಸರ್ಕಾರವನ್ನು ಉತ್ತೇಜಿಸುತ್ತಿದೆ. ಇದೀಗ ಕೇಂದ್ರ ಚುನಾವಣಾ ಆಯೋಗವು ತಕ್ಷಣವೇ ಜಾರಿಗೆ ಬರುವಂತೆ ಈ ಸಂದೇಶಗಳನ್ನು ಕಳುಹಿಸುವುದನ್ನು ನಿಲ್ಲಿಸುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವನ್ನು ಕೇಳಿದೆ.
ನೀತಿ ಸಂಹಿತೆ ಜಾರಿಯಲ್ಲಿದ್ದರೂ ದೇಶದ ನಾಗರಿಕರ ಮೊಬೈಲ್ ಫೋನ್ ಗಳಿಗೆ ಇಂತಹ ಸಂದೇಶಗಳು ರವಾನೆಯಾಗುತ್ತಿರುವುದು ತಿಳಿದು ಬಂದಿದೆ ಎಂದು ಚುನಾವಣಾ ಆಯೋಗ ಹೇಳಿದೆ.