ಕೊರೊನಾ ವ್ಯಾಕ್ಸಿನ್ ಸರ್ಟಿಫಿಕೇಟ್‍ನಿಂದ ಮೋದಿ ಫೋಟೋ ತೆಗೆಯಲು ಕೇಂದ್ರಕ್ಕೆ ಚುನಾವಣಾ ಆಯೋಗ ಸೂಚನೆ

Prasthutha|

ನವದೆಹಲಿ:   ಚುನಾವಣೆ ಹಿನ್ನೆಲೆಯಲ್ಲಿ ಕೊರೊನಾ ವ್ಯಾಕ್ಸಿನ್ ಸರ್ಟಿಫಿಕೇಟ್ ನಿಂದ ಪ್ರಧಾನಿ ಮೋದಿಯವರ ಫೋಟೋವನ್ನು ತೆಗೆದು ಹಾಕುವಂತೆ ಚುನಾವಣಾ ಆಯೋಗ ಕೇಂದ್ರಕ್ಕೆ ಸೂಚನೆ ನೀಡಿದೆ.

- Advertisement -

ಚುನಾವಣೆ ನಡೆಯುವ ಐದು ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ರಾಜ್ಯಗಳಲ್ಲಿ ಕೊರೊನಾ ವ್ಯಾಕ್ಸಿನ್ ಸರ್ಟಿಫಿಕೇಟ್ ನಿಂದ ಮೋದಿ ಭಾವಚಿತ್ರವನ್ನು ತೆಗೆದು ಹಾಕುವಂತೆ ಚುನಾವಣಾ ಆಯೋಗ ಸೂಚಿಸಿದೆ.  

ಕೊರೊನಾ ವ್ಯಾಕ್ಸಿನ್ ಸರ್ಟಿಫಿಕೇಟ್‍ನಲ್ಲಿ ಮೋದಿ ಅವರ ಫೋಟೋ, ಹೆಸರು ಮತ್ತು ಸಂದೇಶವನ್ನು ನಮೂದಿಸುವ ಮೂಲಕ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ದೂರಿನ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಚುನಾವಣಾಧಿಕಾರಿಯಿಂದ ಈ ಕುರಿತು ವರದಿ ನೀಡುವಂತೆ ಸೂಚಿಸಿತ್ತು.

- Advertisement -

ಇದೀಗ ಚುನಾವಣಾ ಆಯೋಗ ಕೇಂದ್ರ ಆರೋಗ್ಯ ಇಲಾಖೆಗೆ ಮೋದಿ ಫೋಟೋವನ್ನು ವ್ಯಾಕ್ಸಿನ್ ಸರ್ಟಿಫಿಕೇಟ್ ನಿಂದ ತೆಗೆಯುವಂತೆ ಸೂಚಿಸಿದೆ. ಹಾಗೂ ಇತರ ರಾಜ್ಯಗಳಲ್ಲಿ ವ್ಯಾಕ್ಸಿನ್ ಸರ್ಟಿಫಿಕೇಟ್ ನಲ್ಲಿ ಮೋದಿ ಫೋಟೋ ಬಳಕೆಗೆ ಅನುಮತಿ ನೀಡಿದೆ.

Join Whatsapp