ಮಂಗಳೂರು: ರಸ್ತೆಯಲ್ಲಿ ಇಫ್ತಾರ್ ಕೂಟ ವ್ಯವಸ್ಥೆ ಆಯೋಜಿಸಿದ್ದಕ್ಕೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಸಾರ್ವಜನಿಕ ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಅಬೂಬಕರ್ ಸಿದ್ದಿಕಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಮಂಗಳೂರು ಹೊರವಲಯ ಮುಡಿಪುವಿನಲ್ಲಿ ರಸ್ತೆಯಲ್ಲಿ ಆಟೋ ಚಾಲಕರಿಗಾಗಿ ಈ ಇಫ್ತಾರ್ ಕೂಟ ಆಯೋಜನೆಗೊಂಡಿತ್ತು. ಇಫ್ತಾರ್ ಕೂಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದೀಗ ಇಫ್ತಾರ್ ಕೂಟದಲ್ಲಿ ರಸ್ತೆ ಬಂದ್ ಮಾಡಿ ಸಂಚಾರಕ್ಕೆ ಅಡ್ಡಿಪಡಿಸಿದ್ದೀರಿ ಎಂದು ಚುನಾವಣಾ ಆಯೋಗದಿಂದ ಆಯೋಜಕರಿಗೆ ನೋಟಿಸ್ ನೀಡಲಾಗಿದೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯೂ ಮಾಡಲಾಗಿದೆ ಎಂದು ನೋಟಿಸ್ ನೀಡಲಾಗಿದೆ.