ಪ್ರಧಾನಿ ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

Prasthutha|

ನವದೆಹಲಿ: ಚುನಾವಣಾ ಆಯೋಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ನೀಡಿದ್ದು, ಏಪ್ರಿಲ್ 29ರೊಳಗೆ ಉತ್ತರಿಸಬೇಕೆಂದು ಕೇಳಿದೆ. ಮೋದಿ ಹಾಗೂ ರಾಹುಲ್ ಗಾಂಧಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -

ಕಾಂಗ್ರೆಸ್ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣಾ ಆಯೋಗ ಈ ನೋಟಿಸ್ ಕಳುಹಿಸಿದೆ. ಮೋದಿ ಮತ್ತು ರಾಹುಲ್ ಭಾಷಣದ ವಿರುದ್ಧ ಬಂದಿರುವ ದೂರಿನ ಮೇರೆಗೆ ಆಯೋಗವು ಈ ನೋಟಿಸ್ ಕಳುಹಿಸಿದೆ. ಈ ದೂರುಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಲಾಗಿದೆ. ಈ ನಾಯಕರು ಧರ್ಮ, ಜಾತಿ, ಕೋಮು, ಭಾಷೆಯ ಆಧಾರದಲ್ಲಿ ಜನರ ನಡುವೆ ದ್ವೇಷ, ಒಡಕು ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಚುನಾವಣಾ ಆಯೋಗವು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 77 ರ ಅಡಿಯಲ್ಲಿ ಎರಡೂ ಪಕ್ಷಗಳ ಅಧ್ಯಕ್ಷರಿಗೆ ನೋಟಿಸ್ ಕಳುಹಿಸಿದೆ.



Join Whatsapp