ಗುವಾಹಟಿ: ಗುವಾಹಟಿ ಮುನ್ಸಿಪಲ್ ಕಾರ್ಪೊರೇಷನ್ (ಜಿಎಂಸಿ) ಚುನಾವಣೆಯ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ವಿರುದ್ಧ ಅಸ್ಸಾಂ ರಾಜ್ಯ ಚುನಾವಣಾ ಆಯೋಗವು ತನಿಖೆಗೆ ಆದೇಶಿಸಿದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಅಸ್ಸಾಂ ರಾಜ್ಯ ಚುನಾವಣಾ ಆಯೋಗ ಕಾಮರೂಪ್ ಉಪ ಆಯುಕ್ತ ಪಲ್ಲಬ್ ಗೋಪಾಲ್ ಝಾ ಅವರಿಗೆ ಸೂಚಿಸಿದೆ.
ಗುವಾಹಟಿಯ ಭೂರಹಿತ ನಿವಾಸಿಗಳಿಗೆ ಭೂ ಪಟ್ಟಾ ನೀಡುವುದಾಗಿ ಘೋಷಿಸುವ ಮೂಲಕ ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಶರ್ಮಾ ಅವರು ಭ್ರಷ್ಟಾಚಾರ ಮತ್ತು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಅಸ್ಸಾಂ ಜಾತಿ ಪರಿಷತ್ (ಎಜೆಪಿ) ಸೋಮವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.