ಅವಹೇಳನಕಾರಿ ಹೇಳಿಕೆ: ಬಿಜೆಪಿ ನಾಯಕ ದಿಲೀಪ್ ಘೋಷ್, ಕಾಂಗ್ರೆಸ್ ನಾಯಕಿ ಸುಪ್ರಿಯಾಗೆ ಚುನಾವಣಾ ಆಯೋಗ ತರಾಟೆ

Prasthutha|

ನವದೆಹಲಿ: ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಬಿಜೆಪಿ ಸಂಸದ, ಹಿರಿಯ ನಾಯಕ ದಿಲೀಪ್ ಘೋಷ್ ಹಾಗೂ ಕಾಂಗ್ರೆಸ್ಸಿನ ರಾಷ್ಟ್ರೀಯ ವಕ್ತಾರೆ ಹಾಗೂ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಸುಪ್ರಿಯಾ ಶ್ರೀನೇತ್ ಅವರನ್ನು ಚುನಾವಣಾ ಆಯೋಗ ತರಾಟೆಗೆ ತೆಗೆದುಕೊಂಡಿದೆ.

- Advertisement -


ದಿಲೀಪ್ ಘೋಷ್ ಮತ್ತು ಸುಪ್ರಿಯಾ ಶ್ರೀನೇತ್ ವಿರುದ್ಧ ಸಲ್ಲಿಕೆಯಾಗಿದ್ದ ದೂರುಗಳ ಕುರಿತು ಚುನಾವಣಾ ಆಯೋಗವು ಇಂದು (ಸೋಮವಾರ) ಮೇಲ್ವಿಚಾರಣೆ ನಡೆಸಿದೆ.
ದಿಲೀಪ್ ಘೋಷ್ ಹಾಗೂ ಸುಪ್ರಿಯಾ ಶ್ರೀನೇತ್ ಅವರು ಕೀಳು ಮಟ್ಟದ ವೈಯಕ್ತಿಕ ದಾಳಿ ಹಾಗೂ ಮಹಿಳೆಯರ ಘನತೆಗೆ ಕುಂದು ತರುವಂತೆ ಮಾತನಾಡುವ ಮೂಲಕ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಸಾಬೀತಾಗಿದೆ ಎಂದು ಆಯೋಗ ಹೇಳಿದೆ.


ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡುವಾಗ ರಾಜಕೀಯ ನಾಯಕರು ಎಚ್ಚರಿಕೆ ವಹಿಸಬೇಕು ಎಂದು ಚುನಾವಣಾ ಆಯೋಗ ಕಿವಿಮಾತು ಹೇಳಿದೆ.



Join Whatsapp