ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿಯವರು ರಾಜ್ಯದಲ್ಲಿ ಈಗಾಗಲೇ 7 ದಿನ, 23 ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮತ ಯಾಚನೆ ಮಾಡಿದ್ದಾರೆ. ಈ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದ ಕರ್ನಾಟಕದಲ್ಲಿ ಮೋದಿಯವರು ಧರ್ಮದ ಹೆಸರಲ್ಲಿ ಮತ ಕೇಳುತ್ತಿದ್ದಾರೆ. ಚುನಾವಣಾ ಪ್ರಚಾರಗಳಲ್ಲಿ ಯಾರೇ ಆಗಲಿ ಧರ್ಮದ ಹೆಸರಲ್ಲಿ, ಧಾರ್ಮಿಕ ವಿಷಯಗಳ ಆಧಾರದ ಮೇಲೆ ಮತ ಕೇಳಿದರೆ, ಅಂಥವರ ಪ್ರಚಾರವನ್ನು ನಿರ್ಬಂಧಿಸಬಹುದು ಎಂದು ಕಾನೂನು ಇದೆ’ ಎಂದು ಹೇಳಿದರು.