Home ಟಾಪ್ ಸುದ್ದಿಗಳು ರಾಷ್ಟ್ರಪತಿ ಚುನಾವಣೆ | ಚುನಾವಣಾ ಆಯೋಗದಿಂದ ಇಂದು ವೇಳಾಪಟ್ಟಿ ಪ್ರಕಟ

ರಾಷ್ಟ್ರಪತಿ ಚುನಾವಣೆ | ಚುನಾವಣಾ ಆಯೋಗದಿಂದ ಇಂದು ವೇಳಾಪಟ್ಟಿ ಪ್ರಕಟ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗ ಇಂದು ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಇದಕ್ಕೆ ಸಂಬಂಧಿಸಿದಂತೆ ಅಪರಾಹ್ನ 3 ಗಂಟೆಗೆ ಸರಿಯಾಗಿ ಪತ್ರಿಕಾಗೋಷ್ಠಿಯನ್ನು ಆಯೋಜಿಸಿದೆ.

ಹಾಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24ಕ್ಕೆ ಕೊನೆಗೊಳ್ಳಲಿದ್ದು, ಅದಕ್ಕಿಂತ ಮೊದಲು ಮುಂದಿನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಸಬೇಕಾಗಿದೆ.

ಸಂಸತ್ತಿನ ಉಭಯ ಸದನಗಳ ಚುನಾಯಿತ ಸದಸ್ಯರು, ಚುನಾವಣಾ ಕಾಲೇಜಿನ ಸದಸ್ಯರು ಮತ್ತು ಕೇಂದ್ರಾಡಳಿತ ಒಳಗೊಂಡಂತೆ ಎಲ್ಲಾ ರಾಜ್ಯಗಳ ಶಾಸಕಾಂಗ ಸಭೆಗಳ ಚುನಾಯಿತ ಸದಸ್ಯರು ರಾಷ್ಟ್ರಪತಿಗಳನ್ನು ಆಯ್ಕೆ ಮಾಡುತ್ತಾರೆ.

Join Whatsapp
Exit mobile version