ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಹಿಂಪಡೆದ ಚುನಾವಣಾ ಆಯೋಗ

Prasthutha|

ಹೊಸದಿಲ್ಲಿ: ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜಾರಿಗೊಳಿಸಿದ್ದ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕೇಂದ್ರ ಚುನಾವಣಾ ಆಯೋಗ ಸೋಮವಾರ ಹಿಂಪಡೆದಿದೆ. ಈ ಕುರಿತು, ರಾಜ್ಯದಲ್ಲಿ ಚುನಾವಣೆ ಪ್ರಕ್ರಿಯೆಗಳು ಮುಗಿದು ಹೊಸ ಸರ್ಕಾರ ರಚನೆಗೆ ದಿನಗಣನೆ ಸನ್ನಿಹಿತವಾಗಿರುವ ಸಂದರ್ಭದಲ್ಲೇ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ.

- Advertisement -

“ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ದಿನಾಂಕದಿಂದ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಜಾರಿಗೊಳಿಸಲಾಗಿದೆ ಮತ್ತು ಅದು ಚುನಾವಣಾ ಪ್ರಕ್ರಿಯೆಯು ಪೂರ್ಣಗೊಳ್ಳುವವರೆಗೆ ಮಾತ್ರ ಜಾರಿಯಲ್ಲಿರುತ್ತದೆ ಎಂಬುದನ್ನು ಈ ಮೂಲಕ ತಿಳಿಸುತ್ತಿದ್ದೇವೆ. ಈಗ, ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಗಳಿಗೆ ಸಂಬಂಧಿಸಿದಂತೆ ಫಲಿತಾಂಶಗಳು ಪ್ರಕಟವಾಗಿವೆ. ಹೀಗಾಗಿ ಮಾದರಿ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಯಾಗುವಂತೆ ಸ್ಥಗಿತಗೊಂಡಿದೆ” ಎಂದು ಆಯೋಗ ತಿಳಿಸಿದೆ.

ಮಾರ್ಚ್ 29ರಂದು ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾಗಿತ್ತು. ಅದರೊಂದಿಗೆ, ಮಾದರಿ ನೀತಿ ಸಂಹಿತೆಯೂ ಜಾರಿಯಾಗಿತ್ತು. ಮೇ 10ರಂದು ಮತದಾನ ನಡೆದಿದ್ದು, ಮೇ 13ರಂದು ಫಲಿತಾಂಶವೂ ಪ್ರಕಟವಾಗಿದೆ. ಇಂದು (ಮೇ 15) ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಆಯೋಗ ಹಿಂಪಡೆದಿದೆ.

Join Whatsapp