Home ಟಾಪ್ ಸುದ್ದಿಗಳು ಪಂಚರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ

ಪಂಚರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ

ನವದೆಹಲಿ: ಗೋವಾ, ಪಂಜಾಬ್, ಮಣಿಪುರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.

ಫೆಬ್ರವರಿ 10 ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಮಾರ್ಚ್ 7 ವರೆಗೆ   ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯಕ್ತ ಸುಶೀಲ್ ಚಂದ್ರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10ರಿಂದ ಮಾರ್ಚ್ 7ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಪಂಜಾಬ್, ಉತ್ತರಾಖಂಡ ಮತ್ತು ಗೋವಾದಲ್ಲಿ ಒಂದೇ ಹಂತದಲ್ಲಿ ಫೆಬ್ರವರಿ 14ರಂದು, ಮಣಿಪುರದಲ್ಲಿ ಫೆ.27 ಮತ್ತು 3ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

 

Join Whatsapp
Exit mobile version