Home ಟಾಪ್ ಸುದ್ದಿಗಳು ಸಿಎಂ ಸಿದ್ದರಾಮಯ್ಯ ವಿರುದ್ಧದ ಚುನಾವಣಾ ತಕರಾರು ಅರ್ಜಿ: ವಿಚಾರಣೆ ಅ. 6ಕ್ಕೆ

ಸಿಎಂ ಸಿದ್ದರಾಮಯ್ಯ ವಿರುದ್ಧದ ಚುನಾವಣಾ ತಕರಾರು ಅರ್ಜಿ: ವಿಚಾರಣೆ ಅ. 6ಕ್ಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಿದ್ದರಾಮಯ್ಯ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಸಲಾಗಿದ್ದು, ಇದು ಪ್ರಚಾರಕ್ಕಾಗಿ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ. ಅರ್ಜಿದಾರರು ಊಹೆಗಳ ಮೇಲೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅರ್ಜಿ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದು, ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 6ಕ್ಕೆ ಹೈಕೋರ್ಟ್ ಮುಂದೂಡಿದೆ.

ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೆ.ಎಂ.ಶಂಕರ ಎಂಬವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವಲ್ಲಿ ಐದು ಗ್ಯಾರಂಟಿ ಯೋಜನೆಗಳು ನೆರವಾಗಿದ್ದವು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಐದು ಯೋಜನೆಗಳು ಜಾರಿ ಮಾಡುತ್ತೇವೆ ಎಂದು ಮತದಾರರನ್ನು ತಮ್ಮತ್ತ ಸೆಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹಿ ಹಾಕಿರುವ ಗ್ಯಾರಂಟಿ ಕಾರ್ಡ್​ಗಳನ್ನು​ ಚುನಾವಣಾ ಪೂರ್ವದಲ್ಲಿ ರಾಜ್ಯಾದ್ಯಂತ ಹಂಚಲಾಗಿತ್ತು.

ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನೆ 123 (1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಅದರಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಪರ ವಕೀಲರಿಂದ ಇದಕ್ಕೆ ಆಕ್ಷೇಪಣೆ ಸಲ್ಲಿಸಲಾಗಿತ್ತು. ಇದು ಪ್ರಚಾರಕ್ಕಾಗಿ ಮತ್ತು ಅರ್ಜಿದಾರರ ಊಹೆಗಳ ಮೇಲೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅರ್ಜಿ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದು, ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 6ಕ್ಕೆ ಮುಂದೂಡಿದೆ.

Join Whatsapp
Exit mobile version