ಮೂರು ಪಾಲಿಕೆಗಳಿಗೆ ಚುನಾವಣೆ: ಮತದಾನ ಪ್ರಗತಿಯಲ್ಲಿ

Prasthutha|

ಬೆಂಗಳೂರು: ಹುಬ್ಬಳ್ಳಿ – ಧಾರವಾಡ , ಬೆಳಗಾವಿ ಹಾಗೂ ಕಲಬುರ್ಗಿ ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಯುತ್ತಿದ್ದು, ಮತದಾನ ಪ್ರಗತಿಯಲ್ಲಿದೆ.

- Advertisement -


ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಕೋವಿಡ್ ಮಾರ್ಗಸೂಚಿ ಪಾಲಿಸಿ ಪಾಲಿಕೆಗಳ ಚುನಾವಣೆ ನಡೆಯುತ್ತಿದೆ.


ಹುಬ್ಬಳ್ಳಿ- ಧಾರವಾಡ ಪಾಲಿಕೆಯ 82, ಕಲಬುರ್ಗಿ ಪಾಲಿಕೆಯ 55 ಹಾಗೂ ಬೆಳಗಾವಿ ಪಾಲಿಕೆಯ 58 ವಾರ್ಡ್ ಗಳಲ್ಲಿ ಮತದಾನ ನಡೆಯುತ್ತಿದೆ. ಬೆಳಗಾವಿ ಮಹಾನಗರ ಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಕೀಯ ಪಕ್ಷಗಳು ಚಿಹ್ನೆಗಳ ಆಧಾರದ ಮೇಲೆ ಸ್ಪರ್ಧಿಸುತ್ತಿವೆ. ಈ ಹಿಂದೆ ಭಾಷೆ ಆಧಾರದ ಮೇಲೆ ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದರು. ಒಟ್ಟು 385 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಸೆಪ್ಟೆಂಬರ್ 6ರಂದು ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಪಾಲಿಕೆ ಚುನಾವಣೆ ಸ್ಥಳೀಯ ಶಾಸಕರಿಗೆ ಪ್ರತಿಷ್ಠೆಯ ವಿಷಯವಾಗಿದ್ದು, ಮತದಾರ ಪ್ರಭು ಪಾಲಿಕೆ ಗದ್ದುಗೆಯನ್ನು ಯಾರ ಕೈಗೆ ನೀಡಲಿದ್ದಾರೆ ಎಂಬುದು ಇದೇ 6ರಂದು ಮಧ್ಯಾಹ್ನದ ವೇಳೆಗೆ ಸ್ಪಷ್ಟಗೊಳ್ಳಲಿದೆ.

Join Whatsapp