ಚುನಾವಣೆಯನ್ನು ಲಘುವಾಗಿ ಪರಿಗಣಿಸಬಾರದು ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Prasthutha|

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಿದ್ಧತೆಯ ಭಾಗವಾಗಿ ಶನಿವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಎಲ್ಲ ಶಾಸಕರು, ಅಭ್ಯರ್ಥಿಗಳಿಗೆ ಆನ್ಲೈನ್ ವೇದಿಕೆಯ ಮಹತ್ವದ ಟಿಪ್ಸ್ ನೀಡಿದರು.

- Advertisement -

ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಜೆಪಿ ನಗರದ ತಮ್ಮ ನಿವಾಸದಿಂದಲೇ ಸಭೆ ನಡೆಸಿದ ಅವರು, ಕೆಲ ಅಭ್ಯರ್ಥಿಗಳಿಗೆ ಚಾಟಿ ಬೀಸಿದರು. ಅಲ್ಲದೆ, ಚುನಾವಣೆಯನ್ನು ಲಘುವಾಗಿ ಪರಿಗಣಿಸಬಾರದು ಹಾಗೂ ಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು.

ಪಕ್ಷದ ಕಚೇರಿಯಿಂದ ಬರುವ ಸೂಚನೆಗಳನ್ನು ಪಾಲಿಸಲು ಸೂಚನೆ ನೀಡಿದ ಮಾಜಿ ಮುಖ್ಯಮಂತ್ರಿಗಳು, ಮತದಾನಕ್ಕೆ ಇನ್ನೂ 37 ದಿನ ಇದೇ, ಇದು ನಿಮಗೆಲ್ಲ ಅಗ್ನಿಪರೀಕ್ಷೆ. ಕ್ಷೇತ್ರದಲ್ಲಿ ಏನಾದರೂ ಸಮಸ್ಯೆ ಇದ್ದರೆ ಬಗೆಹರಿಸಿಕೊಳ್ಳಿ. ಕಾರ್ಯಕರ್ತರು, ಮುಖಂಡರನ್ನು ಒಟ್ಟಿಗೆ ಕರೆದುಕೊಂಡು ಹೋಗಿ ಎಂದು ಅಭ್ಯರ್ಥಿಗಳಿಗೆ ತಿಳಿಸಿದರು ಅವರು.

ಪಂಚರತ್ನ ರಥಯಾತ್ರೆ ಯಶಸ್ವಿ ಆಗಿದೆ. ಮೈಸೂರಿನಲ್ಲಿ ಸಮಾರೋಪ ಸಮಾವೇಶ ಯಶಸ್ವಿ ಆಗಿದೆ. ಪಂಚರತ್ನ ಯೋಜನೆಗಳನ್ನು ಮನೆ ಮನೆಗೂ ತೆಗೆದುಕೊಂಡು ಹೋಗಿ. ಯೋಜನೆಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಡಿ ಎಂದು ಅಭ್ಯರ್ಥಿಗಳಿಗೆ ಸೂಚಿಸಿದರು.

ಇದೇ ವೇಳೆ ಅಭ್ಯರ್ಥಿಗಳ ಪ್ರಶ್ನೆಗಳಿಗೆ ಕುಮಾರಸ್ವಾಮಿ ಅವರು ಉತ್ತರ ನೀಡಿದರು.

- Advertisement -