Home ಟಾಪ್ ಸುದ್ದಿಗಳು ಚುನಾವಣಾ ಚೆಕ್ ಪೋಸ್ಟ್‌ ಗೆ ಲಾರಿ ಡಿಕ್ಕಿ: ಸಿಬ್ಬಂದಿ ಪಾರು

ಚುನಾವಣಾ ಚೆಕ್ ಪೋಸ್ಟ್‌ ಗೆ ಲಾರಿ ಡಿಕ್ಕಿ: ಸಿಬ್ಬಂದಿ ಪಾರು

ರಾಮನಗರ: ಚುನಾವಣಾ ಚೆಕ್ ಪೋಸ್ಟ್‌ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾದ ಘಟನೆ ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ತಡರಾತ್ರಿ ನಡೆದಿದೆ.

ಮರದ ಹೊಟ್ಟು ತುಂಬಿಕೊಂಡು ಮಂಡ್ಯದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಚೆಕ್‌ ಪೋಸ್ಟ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್‌ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಕರ್ತವ್ಯ ನಿರತರಾಗಿದ್ದ ಸಿಬ್ಬಂದಿ ಪಾರಾಗಿದ್ದಾರೆ.

ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Join Whatsapp
Exit mobile version