Home Uncategorized ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ

ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಸೆಮಿಫೈನಲ್ ಎಂದೇ ಬಿಂಬಿತವಾಗಿರುವ ಪಂಪರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್‍ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಿಜೋರಾಂನಲ್ಲಿ ಮಾತ್ರ ನಾಳೆ ಮತ ಎಣಿಕೆ ನಡೆಯಲಿದ್ದು, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳ ಮತ ಎಣಿಕೆ ಇಂದು ಕೆಲವೇ ಹೊತ್ತಲ್ಲಿ ಆರಂಭವಾಗಲಿದೆ.

ಮತದಾನೋತ್ತರ ಸಮೀಕ್ಷೆಯಲ್ಲಿ ತಲಾ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಧಿಕಾರ ಹಿಡಿಯಲಿದ್ದು ಮಿಜೋರಾಮ್ ಅತಂತ್ರವಾಗಲಿದೆ ಎಂದು ಹೇಳಲಾಗಿದ್ದು, ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಲ್ಲಿ ಎದೆ ಬಡಿತ, ಡವ ಡವ ಆರಂಭವಾಗಿದೆ.
ಛತ್ತೀಸ್‌ಗಡ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಏರಲಿದ್ದು ರಾಜಸ್ಥಾನ ಮತ್ತು ಮಧ್ಯ ಪ್ರದೇಶದಲ್ಲಿ ಬಿಜೆಪಿ ರಾಜ್ಯದ ಚುಕ್ಕಾಣಿ ಹಿಡಿಯಲಿದೆ ಎಂದು ಎಕ್ಸಿಟ್ ಪೋಲ್ ವರದಿಗಳು ಹೇಳಿವೆ. ಕೆಲವು ವರದಿ ತೆಲಂಗಾಣದಲ್ಲಿ ಅತಂತ್ರ ಸ್ಥಿತಿ ಎಂದೂ ಹೇಳಿವೆ. ಅದೇ ರೀತಿ ಮಿಜೋರಾಮ್ ವಿಧಾನಸಭೆಯಲ್ಲಿ ಯಾರಿಗೂ ಸ್ಪಷ್ಟ ಬಹುಮತ ಬಾರದೆ ಅತಂತ್ರವಾಗಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ.

ಇಂದು ಬೆಳಗ್ಗೆ 8 ಗಂಟೆಯಿಂದ ಆಯಾ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆಗೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಮತಯಂತ್ರಗಳನ್ನು ಇಟ್ಟಿರುವ ಕೊಠಡಿಗೆ ಬಾರಿ ಬಿಗಿ ಭದ್ರತೆ ಒದಗಿಸಲಾಗಿದೆ. ಸಮೀಕ್ಷೆ ಹೇಳಿದ ಮತಗಟ್ಟೆ ಭವಿಷ್ಯ ನ ನಿಜವೇ ಇಲ್ಲವೇ ಎನ್ನುವುದು ಇಂದು ಮಧ್ಯಾಹ್ನದ ವೇಳೆಗೆ ಬಹಿರಂಗವಾಗಲಿದೆ.ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಸೆಮಿಫೈನಲ್ ಎಂದೇ ಬಿಂಬಿತವಾಗಿರುವ ಪಂಪರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್‍ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಿಜೋರಾಂನಲ್ಲಿ ಮಾತ್ರ ನಾಳೆ ಮತ ಎಣಿಕೆ ನಡೆಯಲಿದ್ದು, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳ ಮತ ಎಣಿಕೆ ಇಂದು ಕೆಲವೇ ಹೊತ್ತಲ್ಲಿ ಆರಂಭವಾಗಲಿದೆ. ಮತದಾನೋತ್ತರ ಸಮೀಕ್ಷೆಯಲ್ಲಿ ತಲಾ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಧಿಕಾರ ಹಿಡಿಯಲಿದ್ದು ಮಿಜೋರಾಮ್ ಅತಂತ್ರವಾಗಲಿದೆ ಎಂದು ಹೇಳಲಾಗಿದ್ದು, ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಲ್ಲಿ ಎದೆ ಬಡಿತ, ಡವ ಡವ ಆರಂಭವಾಗಿದೆ. ಛತ್ತೀಸ್‌ಗಡ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಏರಲಿದ್ದು ರಾಜಸ್ಥಾನ ಮತ್ತು ಮಧ್ಯ ಪ್ರದೇಶದಲ್ಲಿ ಬಿಜೆಪಿ ರಾಜ್ಯದ ಚುಕ್ಕಾಣಿ ಹಿಡಿಯಲಿದೆ ಎಂದು ಎಕ್ಸಿಟ್ ಪೋಲ್ ವರದಿಗಳು ಹೇಳಿವೆ. ಕೆಲವು ವರದಿ ತೆಲಂಗಾಣದಲ್ಲಿ ಅತಂತ್ರ ಸ್ಥಿತಿ ಎಂದೂ ಹೇಳಿವೆ. ಅದೇ ರೀತಿ ಮಿಜೋರಾಮ್ ವಿಧಾನಸಭೆಯಲ್ಲಿ ಯಾರಿಗೂ ಸ್ಪಷ್ಟ ಬಹುಮತ ಬಾರದೆ ಅತಂತ್ರವಾಗಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಇಂದು ಬೆಳಗ್ಗೆ 8 ಗಂಟೆಯಿಂದ ಆಯಾ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆಗೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಮತಯಂತ್ರಗಳನ್ನು ಇಟ್ಟಿರುವ ಕೊಠಡಿಗೆ ಬಾರಿ ಬಿಗಿ ಭದ್ರತೆ ಒದಗಿಸಲಾಗಿದೆ. ಸಮೀಕ್ಷೆ ಹೇಳಿದ ಮತಗಟ್ಟೆ ಭವಿಷ್ಯ ನ ನಿಜವೇ ಇಲ್ಲವೇ ಎನ್ನುವುದು ಇಂದು ಮಧ್ಯಾಹ್ನದ ವೇಳೆಗೆ ಬಹಿರಂಗವಾಗಲಿದೆ.

Join Whatsapp
Exit mobile version