ಚುನಾವಣಾ ಹಗರಣ: ಕಾಂಗ್ರೆಸ್ ನಿಯೋಗದಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು

Prasthutha|

ಬೆಂಗಳೂರು: ಮತದಾರರ ಮಾಹಿತಿ ಕಳವು, ಪಟ್ಟಿಯಿಂದ ನಿರ್ದಿಷ್ಟ ಮತದಾರರ ಹೆಸರು ಕಿತ್ತು ಹಾಕಿರುವುದು ಸೇರಿದಂತೆ ಮತದಾರರ ಪಟ್ಟಿ ಅಕ್ರಮ ಕುರಿತು ಕೇಂದ್ರ ಚುನಾವಣಾ ಆಯೋಗದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಕಾಂಗ್ರೆಸ್ ನಿಯೋಗ ಶನಿವಾರ ದೂರು ಸಲ್ಲಿಸಿತು.

- Advertisement -

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಶಾಸಕ ರಿಜ್ವಾನ್ ಅರ್ಶದ್, ಸೌಮ್ಯ ರೆಡ್ಡಿ, ಎಂಎಲ್’ಸಿ ಯು.ಬಿ. ವೆಂಕಟೇಶ್ ಮತ್ತಿತರರನ್ನು ಒಳಗೊಂಡ ಕಾಂಗ್ರೆಸ್ ನಿಯೋಗವು ಶನಿವಾರ ದೂರು ಸಲ್ಲಿಸಿತು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತು.

ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಲು ಆಗಮಿಸಿದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.



Join Whatsapp