ಚುನಾವಣೆ: ಪ್ರಚಾರಕ್ಕೆ ಧುಮುಕಿದ ಸಿದ್ದರಾಮಯ್ಯ ಸೊಸೆ

Prasthutha|

ಮೈಸೂರು: ಚುನಾವಣೆ ಹಿನ್ನೆಲೆ ವರುಣಾ ಕ್ಷೇತ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ತಮ್ಮ ಸೊಸೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

- Advertisement -


ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಸೊಸೆ ಸ್ಮಿತಾ ರಾಕೇಶ್ ಸಿದ್ದರಾಮಯ್ಯ ಅವರು, ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ. ಇದೇ ವೇಳೆ ಈ ಬಾರಿ ಅತಿಹೆಚ್ಚು ಮತಗಳಿಂದ ಮಾವ ಅವರನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ.


ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಪರ ನಟಿ ರಮ್ಯಾ ಹಾಗೂ ನಟ ದುನಿಯಾ ವಿಜಯ್ ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸುವುದಾಗಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

Join Whatsapp