ಗ್ರಾ.ಪಂ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ವೇಳೆ ಮಾರಾಮಾರಿ: ಚುನಾವಣೆ ಮುಂದೂಡಿಕೆ

Prasthutha|

ಮಂಡ್ಯ: ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ವೇಳೆ ಸದಸ್ಯರ ನಡುವೆ ಮಾರಾಮಾರಿ ನಡೆದಿರುವ ಘಟನೆ ತಾಲೂಕಿನ ಹಲ್ಲೆಗೆರೆಯಲ್ಲಿ ನಡೆದಿದೆ.

- Advertisement -


ಕಚೇರಿಯಲ್ಲಿ ಸದಸ್ಯರುಗಳು ಪರಸ್ಪರ ಹೊಡೆದಾಡಿಕೊಂಡಿದ್ದು, ಗಲಾಟೆಯಿಂದ ಗದ್ದಲದ ವಾತಾವರಣ ನಿರ್ಮಾಣಗೊಂಡಿತ್ತು.


ಜಿದ್ದಾಜಿದ್ದಿಯ ಕಣವಾಗಿ ಮಾರ್ಪಟ್ಟಿದ್ದ ಗ್ರಾಪಂ ವರಿಷ್ಠರ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಸದಸ್ಯರ ನಡುವೆ ಘರ್ಷಣೆ ಉಂಟಾಗಿದ್ದು ಈ ವೇಳೆ ಗಲಾಟೆ ಅತಿರೇಕಕ್ಕೆ ತಿರುಗಿ ಪರಸ್ಪರ ಬಡಿದಾಡಿಕೊಂಡ ಹಿನ್ನೆಲೆ ಚುನಾವಣಾಧಿಕಾರಿಗಳು ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಯನ್ನು ಮುಂದೂಡಿದರು.



Join Whatsapp