ಬೆಂಗಳೂರು; ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಮುಂದಿನ ತಿಂಗಳ 10ರಂದು ಚುನಾವಣೆ ನಡೆಯಲಿದೆ.ಇಂದು ಅಧಿಸೂಚನೆ ಪ್ರಕಟವಾಗುವುದರೊಂದಿಗೆ ನಾಮಪತ್ರ ಸಲ್ಲಿಕೆ ಕಾರ್ಯವು ಇಂದಿನಿಂದಲೇ ಆರಂಭವಾಗಲಿದೆ.
ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ಇದೇ 23ರವರೆಗೂ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಮಾರನೇ ದಿನ 24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 26ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದೆ.
ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ.
ಡಿಸೆಂಬರ್ 14ರಂದು ಮತ ಎಣಿಕೆ ನಡೆದು ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.
ಡಿಸೆಂಬರ್ 16ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ಯಾವುದಾದರೂ ಸರ್ಕಾರಿ ಕಾರ್ಯಕ್ರಮ ನಡೆಸಬೇಕಾದರೆ ಜಿಲ್ಲಾ ಚುನಾವಣಾಧಿಕಾರಿಗಳಿಂದ ಮುಂಚಿತವಾಗಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.