ದೇವೇಗೌಡ, ಮೋದಿ ಸಾಧನೆಗಳ ಮೇಲೆ ಚುನಾವಣೆ: ಸಿ.ಎನ್ ಮಂಜುನಾಥ್

Prasthutha|

ಬೆಂಗಳೂರು: ಹೆಚ್ಡಿ ದೇವೇಗೌಡ, ಕುಮಾರಸ್ವಾಮಿ ಹಾಗೂ ನರೇಂದ್ರ ಮೋದಿ ಸಾಧನೆಗಳ ಮೇಲೆ ಚುನಾವಣೆ ನಡೆಯಲಿ ಎಂದು ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಹೇಳಿದ್ದಾರೆ.

- Advertisement -

ನಾನು ಸುಧೀರ್ಘವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದಿದ್ದೇನೆ. ನನಗೆ ಸಿಕ್ಕ ಅವಕಾಶದಲ್ಲಿ ಒಂದು ಸರ್ಕಾರಿ ವ್ಯವಸ್ಥೆಯಲ್ಲಿ ಪಂಚತಾರಾ ವ್ಯವಸ್ಥೆ ತಂದಿದ್ದೆವು. ನಾನು ಕೇವಲ ಹೃದ್ರೋಗ ತಜ್ಞನಾಗಿ ಕೆಲಸ ಮಾಡಿಲ್ಲ. ಒಬ್ಬ ವ್ಯವಸ್ಥಾಪಕನಾಗಿ, ಒಬ್ಬ ಇಂಜಿನಿಯರ್ ಆಗಿ, ಒಬ್ಬ ಆಡಳಿತಾಧಿಕಾರಿಯಾಗಿ, ಒಬ್ಬ ಸಾಂತ್ವನ ಹೇಳುವ ಕೌನ್ಸಿಲರ್ ಆಗಿ ಕೆಲಸ ಮಾಡಿದ್ದೇನೆ ಎಂದರು.
ನಾನು ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಚುನಾವಣೆಗೆ ಬರುತ್ತಿದ್ದೇನೆ. ನಿಮ್ಮ ಸಹಕಾರ ಇರಲಿ. ಯಾರನ್ನೂ ಸಹ ನಾವು ವೈಯಕ್ತಿಕವಾಗಿ ಟೀಕೆ ಮಾಡುವುದಿಲ್ಲ ಎಂದರು.



Join Whatsapp