Home ಟಾಪ್ ಸುದ್ದಿಗಳು ಚುನಾವಣಾ ಬಾಂಡ್; ಪ್ರಧಾನ ಮಂತ್ರಿ, ಗೃಹಸಚಿವರು ಸುಳ್ಳು ಹೇಳುತ್ತಿದ್ದಾರೆ: ಪ್ರಕಾಶ್ ರಾಜ್

ಚುನಾವಣಾ ಬಾಂಡ್; ಪ್ರಧಾನ ಮಂತ್ರಿ, ಗೃಹಸಚಿವರು ಸುಳ್ಳು ಹೇಳುತ್ತಿದ್ದಾರೆ: ಪ್ರಕಾಶ್ ರಾಜ್

ಮಂಗಳೂರು: ಚುನಾವಣಾ ಬಾಂಡ್ ವಿಷಯದಲ್ಲಿ ಪ್ರಧಾನ ಮಂತ್ರಿ ಮತ್ತು ಗೃಹಸಚಿವರು ಸುಳ್ಳು ಹೇಳುತ್ತಿದ್ದಾರೆ. ಪ್ರಧಾನಿ ಮೋದಿ ಅವರು ಮನ್ ಕಿ ಬಾತ್ ನಲ್ಲಿ ಈ ಲೂಟಿ ಬಗ್ಗೆ ಯಾಕೆ ಹೇಳಲಿಲ್ಲ ಎಂದು ನಟ ಪ್ರಕಾಶ್ ರಾಜ್ ಪ್ರಶ್ನಿಸಿದರು.


ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾವು ₹ 6000 ಕೋಟಿ ತೆಗೆದುಕೊಂಡಿದ್ದೇವೆ, ಆದರೆ, 330 ಸಂಸದರು ಇದ್ದಾರೆ. ಕಡಿಮೆ ಸಂಸದರು ಇರುವ ಪಕ್ಷಗಳು ಜಾಸ್ತಿ ತೆಗೆದುಕೊಂಡಿದ್ದಾರೆ ಎನ್ನುತ್ತಾರೆ. ಇದರರ್ಥ ಏನು? ಹೆಚ್ಚು ತೆಗೆದುಕೊಂಡು ಹಂಚಿಕೊಂಡರೆ ಶಿಕ್ಷೆ ಕಡಿಮೆ ಆಗಬೇಕೆಂದೇ ಎಂದು ಅವರು ಕೇಳಿದರು.


ಲೋಕಸಭೆ ಚುನಾವಣೆಯಲ್ಲಿ ಯಾರ ಪರವಾಗಿಯೂ ಪ್ರಚಾರ ಮಾಡುವುದಿಲ್ಲ. ಆಳುವ ಪಕ್ಷವನ್ನು ಪ್ರಶ್ನಿಸುವುದಷ್ಟೆ ನನ್ನ ಕೆಲಸ. ಜನರೂ ಅಷ್ಟೇ, ಪಕ್ಷ ನೋಡಿ ಮತ ಹಾಕಬಾರದು. ನಿಮಗೆ ಸಿಗುವ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರಯತ್ನಿಸಬೇಕು.

Join Whatsapp
Exit mobile version