Home ಟಾಪ್ ಸುದ್ದಿಗಳು ಚುನಾವಣಾ ಬಾಂಡ್: SBIಗೆ ಮತ್ತೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

ಚುನಾವಣಾ ಬಾಂಡ್: SBIಗೆ ಮತ್ತೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದಂತೆ ಭಾರತೀಯ ಸ್ಟೇಟ್ ಬ್ಯಾಂಕ್ ಗೆ (ಎಸ್ ಬಿಐ) ಸುಪ್ರೀಂ ಕೋರ್ಟ್ ಮತ್ತೆ ನೋಟಿಸ್ ಜಾರಿ ಮಾಡಿದೆ.


ರಾಜಕೀಯ ಪಕ್ಷಗಳು ಪಡೆದಿರುವ ಚುನಾವಣಾ ಬಾಂಡ್ ಗಳ ಸಂಖ್ಯೆಯನ್ನು ಬಹಿರಂಗಪಡಿಸಬೇಕು ಎಂದು ಎಸ್ ಬಿಐಗೆ ಆದೇಶಿಸಿರುವ ಸುಪ್ರೀಂ ಕೋರ್ಟ್, ಪ್ರಕರಣ ಸಂಬಂಧ ಬ್ಯಾಂಕ್ನ ಪ್ರತಿಕ್ರಿಯೆಯನ್ನು ಕೇಳಿದೆ.


ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್ ಅವರಿದ್ದ ಐವರು ನ್ಯಾಯಮೂರ್ತಿಗಳ ಪೀಠವು ಈ ಆದೇಶ ನೀಡಿದೆ.
ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 18ಕ್ಕೆ ಮುಂದೂಡಿದೆ.

Join Whatsapp
Exit mobile version