ನವದೆಹಲಿ: ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕನ್ನು ಉಲ್ಲಂಘನೆ ಮಾಡುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಇಬಿಎಸ್ ನ್ನು ನಿಷೇಧಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಚುನಾವಣಾ ಬಾಂಡ್ ಗಳನ್ನು ಅಸಾಂವಿಧಾನಿಕ ಎಂದು ಹೇಳಿದ್ದು, ಬ್ಯಾಂಕ್ ಗಳು ಚುನಾವಣಾ ಬಾಂಡ್ ಗಳನ್ನು ನೀಡುವುದನ್ನು ನಿಲ್ಲಿಸಲಿ ಎಂದು ಮಹತ್ವದ ತೀರ್ಪು ಪ್ರಕಟಿಸಿದೆ. ಖಾಸಗಿತನದ ಮೂಲಭೂತ ಹಕ್ಕು ರಾಜಕೀಯ ಗೋಪ್ಯತೆ ಮತ್ತು ಸಂಬಂಧಿತ ನಾಗರಿಕರ ಹಕ್ಕನ್ನು ಒಳಗೊಂಡಿದೆ ಎಂದು ಪೀಠ ಹೇಳಿದೆ.
ಯೋಜನೆಯನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಎರಡು ಪ್ರತ್ಯೇಕ, ಸರ್ವಾನುಮತದ ತೀರ್ಪುಗಳನ್ನು ಪ್ರಕಟಿಸಿದೆ.
ರಾಜಕೀಯ ಪಕ್ಷಗಳು ನಗದೀಕರಿಸಿದ ಚುನಾವಣಾ ಬಾಂಡ್ ಗಳ ವಿವರಗಳನ್ನು ಎಸ್ಬಿಐ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಚುನಾವಣಾ ಆಯೋಗಕ್ಕೆ(ಇಸಿಐ) ಎಸ್ಬಿಐ ವಿವರಗಳನ್ನು ಸಲ್ಲಿಸಬೇಕು. ಆಯೋಗವು ಈ ವಿವರಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.