ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶಿಸಿದ್ದಾರೆ.

- Advertisement -

 ಈ ನಿಟ್ಟಿನಲ್ಲಿ ಎಲ್ಲ ಆಟೋರಿಕ್ಷಾಗಳೊಂದಿಗೆ ಇ- ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ವಲಯ 1 ರಲ್ಲಿ ನೀಲಿ ಬಣ್ಣದ ಹಾಗೂ ವಲಯ 2 ರಲ್ಲಿ ಹಳದಿ ಬಣ್ಣದ  ಸ್ಟಿಕ್ಕರ್/ ಗುರುತಿನ ಸಂಖ್ಯೆಗಳನ್ನು ಪೊಲೀಸ್ ಇಲಾಖೆಯಿಂದ ಪಡೆದು ಅಂಟಿಸಲು ಜಿಲ್ಲಾಧಿಕಾರಿಗಳ  ದಿನಾಂಕ 24-11-2022ರ ಅಧಿಸೂಚನೆ  ಮತ್ತು 23-01-2023 ರ ಮಾರ್ಪಾಡು ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆರ್.ಟಿ.ಓ. ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಅಲ್ಲದೇ, ಈ ಸಂಬಂಧ ಅವಶ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸಲು ಮಂಗಳೂರು ನಗರ ಡಿಸಿಪಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಧಿಕಾರ ನೀಡಲಾಗಿದೆ.

- Advertisement -

 ಮೋಟಾರು ವಾಹನ ಕಾಯಿದೆಯಂತೆ ಪಾರ್ಕಿಂಗ್ ಸ್ಥಳಗಳನ್ನು ಮತ್ತು ನಿಲುಗಡೆ ನಿಲ್ದಾಣಗಳಿಗೆ ಸ್ಥಳಗಳನ್ನು ನಿರ್ಧರಿಸಲು ಮಂಗಳೂರು ನಗರದಲ್ಲಿ ಮಹಾನಗರಪಾಲಿಕೆ ಆಯುಕ್ತರು ಹಾಗೂ ಇತರೆ ಪ್ರದೇಶಗಳಲ್ಲಿ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಅಧಿಕಾರ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.



Join Whatsapp