ಬಳ್ಳಾರಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಯಕತ್ವದ ಭಾರತ್ ಜೋಡೋ ಯಾತ್ರೆ ವೇಳೆ ವಿದ್ಯುತ್ ಅವಘಡ ಸಂಭವಿಸಿ ಐವರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಹೊಸ ಮೋಕಾ ಗ್ರಾಮದ ಡೊಡ್ಡ ಮೋರಿ ಬಳಿ ನಡೆದಿದೆ.
ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬರ ಕೈಯಲ್ಲಿದ್ದ ಕಬ್ಬಿಣದ ರಾಡ್ ಹೊಂದಿದ್ದ ಕಾಂಗ್ರೆಸ್ ಧ್ವಜ ವಿದ್ಯುತ್ ಲೈನ್ಗೆ ತಗುಲಿದ ಹಿನ್ನೆಲೆ ಅವಘಡ ಸಂಭವಿಸಿದೆ.
ಗಾಯಾಳುಗಳನ್ನು ಮೋಕಾ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಣ್ಣ, ದೊಡ್ಡಪ್ಪ, ಸಂತೋಷ್ ಸಹಿತ ಐದು ಜನರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಶಾಸಕ ನಾಗೇಂದ್ರ ಅವರು ಮೋಕಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಗಾಯಾಳುಗಳಿಗೆ ರಾಹುಲ್ ಗಾಂಧಿ ಅವರು ತಲಾ ಒಂದು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.