ಮಡಿಕೇರಿ:ಕಾಡಿನಿಂದ ಬಂದ ಆನೆ ವ್ಯಕ್ತಿಯೊಬ್ಬನ ಮೇಲೆ ದಾಳಿ ನಡೆಸಿದ್ದು, ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬೀರುಗ ಗ್ರಾಮದಲ್ಲಿ ನಡೆದಿದೆ.
ಬೀರುಗ ಗ್ರಾಮದ 58 ವರ್ಷದ ಹಾಲಪ್ಪ ಆನೆ ದಾಳಿಗೆ ಒಳಗಾದ ವ್ಯಕ್ತಿಯಾಗಿದ್ದು, ಬೆಳಗ್ಗೆ ತೊಟಕ್ಕೆ ಹೋದ ಸಂದರ್ಭ ಆನೆ ದಾಳಿ ನಡೆಸಿದೆ. ದಾಳಿಗೆ ಒಳಗಾದ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಕೊಡಗಿನಲ್ಲಿ ಆಗಾಗ ಈ ರೀತಿ ಘಟನೆಗಳು ಸಂಭವಿಸುತ್ತಿದ್ದು, ಇದಕ್ಕೆ ಶಾಶ್ವತ ಪರಿಹರ ಕಲ್ಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.