ಹನ್ನೊಂದು ತಿಂಗಳ ಮಗು ತೊಟ್ಟಿಯಲ್ಲಿ ಬಿದ್ದು ಸಾವು

ಶಿವಮೊಗ್ಗ: ಹನ್ನೊಂದು ತಿಂಗಳ ಮಗು ಮನೆಯ ಮುಂದಿನ ತೊಟ್ಟಿಯಲ್ಲಿ ಬಿದ್ದು ಮೃತಪಟ್ಟ  ಘಟನೆ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ನಡೆದಿದೆ.

ಚಿಕ್ಕಜೋಗಿಹಳ್ಳಿಯ ದೇವರಾಜ್ ಹಾಗೂ ಅನುಷಾ ದಂಪತಿಯ ಮುದ್ದಿನ ಮಗನಾದ ಅಕ್ಷಯ್ (11 ತಿಂಗಳು ) ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದೆ.

- Advertisement -

ಮುಂದಿನ ವಾರ ಒಂದನೇ ವರ್ಷಕ್ಕೆ ಕಾಲಿಡುತ್ತಿರುವ  ಮಗುವಿನ ಜನ್ಮ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ದಂಪತಿ ಯೋಚಿಸಿದ್ದರು. ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪೂಜಾ ಕರ್ಮಗಳಲ್ಲಿ ತಲ್ಲೀಣರಾಗಿದ್ದ ವೇಳೆ ಅಂಬೆಗಾಲಿಡುತ್ತಾ ಹೋದ  ಮಗು ತೊಟ್ಟಿಗೆ ಬಿದ್ದಿದೆ.

ಸ್ವಲ್ಪ ಹೊತ್ತಿನ ನಂತರ ಮಗುವಿನ ತಾತ ವಾಹನ ತೊಳೆಯಲು ತೊಟ್ಟಿಯಲ್ಲಿ ನೀರು ತೆಗೆಯಲು ಬಗ್ಗಿದಾಗ ಮಗುವನ್ನು ಕಂಡು ದಿಗ್ಭ್ರಾಂತರಾಗಿದ್ದಾರೆ. ತಕ್ಷಣ ಶಿಕಾರಿಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನವಾಗಲಿಲ್ಲ.

- Advertisement -