ಎಲ್ಗಾರ್ ಪರಿಷತ್ ಪ್ರಕರಣ: ಆನಂದ್ ತೇಲ್ತುಂಬ್ಡೆ ಜೈಲಿನಿಂದ ಬಿಡುಗಡೆ

Prasthutha|

ಮುಂಬೈ: ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಬಂಧಿತರಾಗಿದ್ದ ಖ್ಯಾತ ವಿದ್ವಾಂಸ ಆನಂದ್ ತೇಲ್ತುಂಬ್ಡೆ ಅವರು ನವಿ ಮುಂಬೈನ ಸೆಂಟ್ರಲ್ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿ ಆನಂದ್ ಅವರನ್ನು ಎಲ್ಗಾರ್ ಪ್ರಕರಣದಲ್ಲಿ NIA ಬಂಧಿಸಿದ್ದು, ಬಾಂಬೆ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್’ಗೆ ಅರ್ಜಿ ಸಲ್ಲಿಸಿದ NIAಯ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಒಂದು ದಿನದ ಬಳಿಕ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ.

ಈ ಪ್ರಕರಣದಲ್ಲಿ ಎರಡೂವರೆ ವರ್ಷಗಳ ಕಾಲ ಜೈಲಿನಲ್ಲಿದ್ದ 73 ವರ್ಷದ ಆನಂದ್ ತೇಲ್ತುಂಬ್ಡೆ ಅವರು ಇಂದು ಮಧ್ಯಾಹ್ನ 1.15ಕ್ಕೆ ಜೈಲಿನಿಂದ ಹೊರಬಂದಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

- Advertisement -

ಈ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಲಿರುವ ಆರೋಪಿಗಳಲ್ಲಿ ಆನಂದ್ ಮೂರನೇ ವ್ಯಕ್ತಿಯಾಗಿದ್ದಾರೆ. ಈ ಹಿಂದೆ ಕವಿ ವರವರ ರಾವ್ ಅವರು ಅನಾರೋಗ್ಯ ಕಾರಣದಿಂದ ಜಾಮೀನಿನ ಮೇಲೆ ಬಿಡುಗಡೆಯಾದರೆ, ಹಿರಿಯ ವಕೀಲೆ ಸುಧಾ ಭಾರದ್ವಾಜ್ ಅವರು ಸಾಮಾನ್ಯ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

Join Whatsapp