ಟ್ವಿಟರ್ ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದ ಎಲಾನ್ ಮಸ್ಕ್

Prasthutha|

ನ್ಯೂಯಾರ್ಕ್: ಒಂದಲ್ಲಾ ಒಂದು ರೀತಿಯ ಸುದ್ದಿಯಲ್ಲಿರುವ ಟ್ವಿಟರ್ ಸಿಇಒ ಎಲಾನ್ ಮಸ್ಕ್ ಇದೀಗ ತನ್ನ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ಅವರು ಕಂಪನಿಯನ್ನು ಉತ್ತಮವಾಗಿ ನಡೆಸಿಕೊಂಡು ಹೋಗುವ ಮೂರ್ಖ ಸಿಕ್ಕ ತಕ್ಷಣ ನಾನು ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ’ ಮಸ್ಕ್ ಹೇಳಿದ್ದಾರೆ. ಹುದ್ದೆ ತೊರೆದ ನಂತರ ನಾನು ಸಾಫ್ಟ್’ವೇರ್ ಮತ್ತು ಸರ್ವರ್ ತಂಡಗಳನ್ನು ಮುನ್ನಡೆಸುತ್ತೇನೆ ಎಂದು ಹೇಳಿದ್ದಾರೆ.

ತಾನು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಯಿಂದ ಕೆಳಗಿಳಿಯಬೇಕೆ ಎಂದು ಪ್ರಶ್ನಿಸಿ ಟ್ವಿಟರ್’ನಲ್ಲಿ ಮಸ್ಕ್ ಸಮೀಕ್ಷೆ ಕೈಗೊಂಡಿದ್ದರು. ಈ ಸಮೀಕ್ಷೆಯಲ್ಲಿ ಹೊರಹೊಮ್ಮುವ ಫಲಿತಾಂಶಕ್ಕೆ ಬದ್ಧವಾಗಿರುವುದಾಗಿಯೂ ಅವರು ಘೋಷಿಸಿದ್ದರು.

- Advertisement -

ಅದರಂತೆ ಭಾನುವಾರ ಸಂಜೆ ಆರಂಭವಾದ ಈ ಸಮೀಕ್ಷೆಯಲ್ಲಿ 1.75 ಕೋಟಿ ಬಳಕೆದಾರರು ಪಾಲ್ಗೊಂಡು ಮತ ಚಲಾಯಿಸಿದ್ದಾರೆ. ಟ್ವಿಟರ್ ಸಿಇಒ ಸ್ಥಾನವನ್ನು ಮಸ್ಕ್ ತೊರೆಯಬೇಕೆಂಬುದರ ಪರವಾಗಿ ಶೇ 57.5ರಷ್ಟು ಬಳಕೆದಾರರು ಮತ ಚಲಾಯಿಸಿದರೆ, ಶೇ 42.5ರಷ್ಟು ಬಳಕೆದಾರರು ಸಿಇಒ ಸ್ಥಾನ ತೊರೆಯಬಾರದೆಂದು ಮತ ಚಲಾಯಿಸಿದ್ದರು.



Join Whatsapp