Home ಟಾಪ್ ಸುದ್ದಿಗಳು ತುರ್ತು ಪರಿಸ್ಥಿತಿ ಕರಾಳ ಅಧ್ಯಾಯ; ಮತ್ತೆ ಕಾಂಗ್ರೆಸಿಗರ ಕೆಂಗಣ್ಣಿಗೆ ಗುರಿಯಾದ ಶಶಿ ತರೂರ್

ತುರ್ತು ಪರಿಸ್ಥಿತಿ ಕರಾಳ ಅಧ್ಯಾಯ; ಮತ್ತೆ ಕಾಂಗ್ರೆಸಿಗರ ಕೆಂಗಣ್ಣಿಗೆ ಗುರಿಯಾದ ಶಶಿ ತರೂರ್

0

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ನೆಹರು-ಗಾಂಧಿ ಕುಟುಂಬವನ್ನು ನೇರವಾಗಿ ಗುರಿಯಾಗಿಸಿಕೊಂಡು ತುರ್ತು ಪರಿಸ್ಥಿತಿಯ ಅವಧಿಯನ್ನು ಕಟುವಾಗಿ ಟೀಕಿಸುವ ಮೂಲಕ ತಮ್ಮ ಪಕ್ಷದೊಳಗೆ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.

ಮಲಯಾಳಂ ದಿನಪತ್ರಿಕೆ ದೀಪಿಕಾದಲ್ಲಿ ಇತ್ತೀಚೆಗೆ ಪ್ರಕಟವಾದ ಶಶಿ ತರೂರ್ ಅವರ ಲೇಖನವು ವೈರಲ್ ಆಗಿದೆ. ಇದರಲ್ಲಿ ಶಶಿ ತರೂರ್ ತುರ್ತು ಪರಿಸ್ಥಿತಿಯನ್ನು ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ “ಕರಾಳ ಅಧ್ಯಾಯ” ಎಂದು ಹೇಳಿದ್ದಾರೆ. ಆ ಸಮಯದಲ್ಲಿ ನಡೆದ ಚಿತ್ರಹಿಂಸೆ, ದೌರ್ಜನ್ಯಗಳನ್ನು ಮರೆಯಲು ಸಾಧ್ಯವೇ ಇಲ್ಲ ಎಂದಿದ್ದಾರೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಸರ್ವಾಧಿಕಾರಿ ವಿಧಾನವು ಸಾರ್ವಜನಿಕ ಜೀವನವನ್ನು ಭಯದ ಸ್ಥಿತಿಗೆ ತಳ್ಳಿತು. ಆದರೆ, ಇಂದಿನ ಭಾರತವು 1975ರ ಭಾರತವಲ್ಲ ಎಂದು ಒತ್ತಿ ಹೇಳುವ ಮೂಲಕ ಮತ್ತೊಮ್ಮೆ ಪರೋಕ್ಷವಾಗಿ ಶಶಿ ತರೂರ್ ಬಿಜೆಪಿ ಆಡಳಿತವನ್ನು ಹೊಗಳಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಕಠಿಣ ಕ್ರಮಗಳನ್ನು ಜಾರಿಗೆ ತಂದರು. ಅವರ ಮಗ ಸಂಜಯ್ ಗಾಂಧಿ ಗ್ರಾಮೀಣ ಪ್ರದೇಶಗಳಲ್ಲಿ ಬಲವಂತದ ಸಂತಾನಹರಣ ಶಸ್ತ್ರಚಿಕಿತ್ಸೆ ಮತ್ತು ಹಿಂಸಾಚಾರ ಸೇರಿದಂತೆ ಭಯಾನಕ ದೌರ್ಜನ್ಯಗಳನ್ನು ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಆಪರೇಷನ್ ಸಿಂಧೂರ್ ಬಳಿಕ ಬಿಜೆಪಿ ಸರ್ಕಾರದ ಪರವಾಗಿ ಹಲವು ಬಾರಿ ಹೇಳಿಕೆಗಳನ್ನು ನೀಡುತ್ತಿರುವ ತಿರುವನಂತಪುರಂ ಸಂಸದ ಶಶಿ ತರೂರ್ ವಿರುದ್ಧ ಕಾಂಗ್ರೆಸ್​​ನಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಹಿರಿಯ ನಾಯಕರೇ ಬೇರೆ ಪಕ್ಷದ ಪರವಾಗಿ ಹೇಳಿಕೆ ನೀಡಿದರೆ ಅದು ಕಾರ್ಯಕರ್ತರ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂದು ಕಾಂಗ್ರೆಸ್ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಅದರ ನಡುವೆ ಇದೀಗ ಶಶಿ ತರೂರ್ ಕಾಂಗ್ರೆಸ್​ನ ಬಹಳ ಜನಪ್ರಿಯ ನಾಯಕಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಆಡಳಿತವನ್ನು ಬಹಿರಂಗವಾಗಿಯೇ ಟೀಕಿಸುವ ಮೂಲಕ ಕಾಂಗ್ರೆಸಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version