ಭಾರತ ಎಂದು ಮರುನಾಮಕರಣ |ಚುನಾವಣೆ ಹತ್ತಿರ ಬರುತ್ತಿರುವುದರಿಂದ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ: ಸಿದ್ದರಾಮಯ್ಯ

Prasthutha|

ಮಧುಗಿರಿ: ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂಥ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಇಂದು   ಮಧುಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ದೇಶದ ಸಂವಿಧಾನವನ್ನು  26 ನೇ ನವೆಂಬರ್ 1949 ರಂದು ಅಂಗೀಕಾರ ಮಾಡಿದ್ದಾರೆ. ಅಂದಿನಿಂದ  ಭಾರತವನ್ನು ಇಂಡಿಯಾ ಎಂದೇ ಕರೆಯಲಾಗಿದೆ. ಈಗ ಬದಲಾವಣೆ ಮಾಡುವ ಅಗತ್ಯವೇನು ಎಂದರು.

- Advertisement -

ಸಂವಿಧಾನದ ಪೀಠಿಕೆಯಲ್ಲಿಯೂ ಭಾರತದ ಪ್ರಜೆಗಳಾದ ನಾವು ಎಂದೇ ಹೇಳಿದ್ದೇವೆ  ಈಗ ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು.

ಗೃಹ ಸಚಿವ ಡಾ: ಜಿ.ಪರಮೇಶ್ವರ್ ಅವರು ಹಿಂದೂ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಯಾವುದೇ ಧರ್ಮದಲ್ಲಿ ತಾರತಮ್ಯ ಮಾಡುವುದಿಲ್ಲ. ಹಿಂದೂ, ಇಸ್ಲಾಮ್, ಕ್ರೈಸ್ತ,  ಸಿಖ್, ಭೌದ್ಧ,ಧರ್ಮದಲ್ಲಿ  ದಯವೇ ಧರ್ಮದ ಮೂಲವಯ್ಯ ಎಂದಿದ್ದಾರೆ ಎಂದರು.



Join Whatsapp