ಅಧಿಕಾರಿಗಳ ಕಿರುಕುಳ ಆರೋಪ: ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ನೌಕರ

Prasthutha|

ಆನೇಕಲ್: ಪುರಸಭೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ದು, ಡಿ ಗ್ರೂಪ್ ನೌಕರ ಕಚೇರಿಯಲ್ಲೇ ಸಿಬ್ಬಂದಿ ಎದುರೇ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.

- Advertisement -


ವೇಣು ಆತ್ಮಹತ್ಯೆಗೆ ಯತ್ನಿಸಿದ ಡಿ ಗ್ರೂಪ್ ನೌಕರ. ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಲಾಗಿದೆ ಎನ್ನಲಾಗುತ್ತಿದ್ದು, ಅಸ್ವಸ್ಥ ನೌಕರ ವೇಣುಗೆ ಚಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.


ಪುರಸಭೆ ಮುಖ್ಯಾಧಿಕಾರಿ ಶ್ವೇತಾಬಾಯಿ ವಿರುದ್ಧ ನೌಕರ ವೇಣು ಕುಟುಂಬಸ್ಥರು ಕಿರುಕುಳ ಆರೋಪ ಮಾಡಿದ್ದಾರೆ. ಶ್ವೇತಾಬಾಯಿ ಟಾರ್ಚರ್ ಕೊಟ್ಟಿದ್ದಾರೆ ಎಂದು ವೇಣು ತಾಯಿ ಗಂಭೀರ ಆರೋಪ ಮಾಡಿದ್ದಾರೆ.