Home ಟಾಪ್ ಸುದ್ದಿಗಳು ಬೋನಸ್ ನೀಡಲಿಲ್ಲ ಎಂದು ಗ್ರಾಮ ಪಂಚಾಯತ್ ಕಟ್ಟಡಕ್ಕೆ ಚಪ್ಪಲಿ ಹಾರ ಹಾಕಿದ ನೌಕರ

ಬೋನಸ್ ನೀಡಲಿಲ್ಲ ಎಂದು ಗ್ರಾಮ ಪಂಚಾಯತ್ ಕಟ್ಟಡಕ್ಕೆ ಚಪ್ಪಲಿ ಹಾರ ಹಾಕಿದ ನೌಕರ

ದೇವನಹಳ್ಳಿ : ಗ್ರಾಮ ಪಂಚಾಯತ್ ಕಟ್ಟಡಕ್ಕೆ ಸಿಬ್ಬಂದಿಯೋರ್ವ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿಯಲ್ಲಿ ನಡೆದಿದೆ.


ಸಿಬ್ಬಂದಿ ಮನೆಗೆ ಹೋದ ನಂತರ ಈ ಕೃತ್ಯ ಎಸಗಲಾಗಿದೆ. ಈ ಬಗ್ಗೆ ದೇವನಹಳ್ಳಿ ತಾಲೂಕು ಪಂಚಾಯಿತಿ ಇಒ ವಸಂತ್ ಕುಮಾರ್ ಸೂಚನೆ ಮೇರೆಗೆ ಪಿಡಿಒ ಶಿವರಾಜ್ ವಿಜಯಪುರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.


ಪ್ರತಿ ವರ್ಷ ದಸರಾ ಹಬ್ಬಕ್ಕೆ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಬೋನಸ್ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಬೋನಸ್ ನೀಡಲು ಪಿಡಿಒ ನಿರಾಕರಿಸಿದ್ದಾರೆ. ಈ ಕಾರಣಕ್ಕೆ ಸಿಬ್ಬಂದಿ ಆಕ್ರೋಶಗೊಂಡು ಈ ರೀತಿಯ ಕೃತ್ಯ ಮಾಡಲಾಗಿದೆ ಎಂಬ ಆರೋಪಿಸಲಾಗಿದೆ.

Join Whatsapp
Exit mobile version