ಇಂಜಿನಿಯರ್ ಮೇಲೆ 10 ಮಂದಿ ಸಾಮೂಹಿಕ ಅತ್ಯಾಚಾರ ಪ್ರಕರಣ: 7 ಮಂದಿ ಬಂಧನ

Prasthutha|

ರಾಂಚಿ: ಜಾರ್ಖಂಡ್ ನಲ್ಲಿ 26 ವರ್ಷದ ಮಹಿಳೆ ಮೇಲೆ ಸುಮಾರು 10 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಮಂದಿಯನ್ನು ಬಂಧಿಸಲಾಗಿದ್ದು, ಇದರಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಘಟನಾ ಸ್ಥಳದ ಸುತ್ತ ಪರಿಶೀಲನೆ ನಡೆಸಿದ್ದ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು, ಸ್ಥಳೀಯರನ್ನೂ ವಿಚಾರಣೆಗೆ ಒಳಪಡಿಸಿದ್ದರು. ಅವರು ನೀಡಿದ್ದ ಮಾಹಿತಿಯ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಬಳಿ ಮಹಿಳೆಯ ಮೊಬೈಲ್ ಹಾಗೂ ಪರ್ಸ್ ದೊರೆತಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆಶುತೋಷ್ ಶೇಖರ್ ಹೇಳಿದ್ದಾರೆ.

ವೃತ್ತಿಯಲ್ಲಿ ಸಾಪ್ಟ್ ವೇರ್ ಇಂಜಿನಿಯರ್ ಆಗಿರುವ ಮಹಿಳೆಯು ಬೆಂಗಳೂರಿನ ಪ್ರತಿಷ್ಠಿತ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ಸಂಜೆ ಸ್ನೇಹಿತನ ಜೊತೆ ಬೈಕ್ ನಲ್ಲಿ ಹೋಗುತಿದ್ದ ವೇಳೆ 10 ಮಂದಿಯ ಗುಂಪೊಂದು ಅವರಿಬ್ಬರನ್ನು ತಡೆದು ಸ್ನೇಹಿತನನ್ನು ಥಳಿಸಿ, ಮಹಿಳೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿತ್ತು.

Join Whatsapp