ಕೋವಿಡ್ ಭೀತಿಯಿಂದ ತಂಡವನ್ನು ಕಣಕ್ಕಿಳಿಸದ ಭಾರತ | ಟೆಸ್ಟ್ ಪಂದ್ಯಾಟ ರದ್ದು

Prasthutha|

ಮ್ಯಾಂಚೆಸ್ಟರ್: ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಎರಡು ತಂಡಗಳ ನಡುವಿನ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯವನ್ನು ಕೋವಿಡ್ ಪ್ರಕರಣಗಳು ಹೆಚ್ಚಾಗುವ ಭೀತಿಯಿಂದಾಗಿ ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಶುಕ್ರವಾರ ಮಧ್ಯಾಹ್ನ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ (ಇಸಿಬಿ) ಈ ಸುದ್ದಿಯನ್ನು ದೃಢಪಡಿಸಿದ್ದು, ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಕೋವಿಡ್‌ ಪ್ರಕರಣಗಳು ಹೆಚ್ಚಳವಾಗುವ ಭೀತಿಯಿಂದ ವಿಷಾದನೀಯವೆಂಬಂತೆ ಭಾರತಕ್ಕೆ ತಂಡವನ್ನು ಕಣಕ್ಕಿಳಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಇಂದು ನಡೆಯಲಿದ್ದ ಐದನೇ ಟೆಸ್ಟ್‌ ಪಂದ್ಯಾಟವನ್ನು ರದ್ದುಗೊಳಿಸಲಾಗಿದೆ” ಎಂದು ಇಸಿಬಿಯು ಬಿಸಿಸಿಐ ಜೊತೆಗಿನ ಅಧಿಕೃತ ಮಾತುಕತೆಯ ಬಳಿಕ ಹೇಳಿಕೆ ನೀಡಿದೆ.

- Advertisement -