ಭೂಗತ ಪಾತಕಿ ರವಿ ಪೂಜಾರಿ ಮುಂಬೈ ಪೊಲೀಸರ ವಶಕ್ಕೆ | ಹೈಕೋರ್ಟ್ ಗೆ ಅರ್ಜಿ

Prasthutha|

ಬೆಂಗಳೂರು : ಭೂಗತ ಪಾತಕಿ ರವಿ ಪೂಜಾರಿ ತನ್ನನ್ನು ಮುಂಬೈಗೆ ಕರೆದುಕೊಂಡು ಹೋದರೆ ಜೀವಕ್ಕೆ ಅಪಾಯವಿದೆ ಎಂದು ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾನೆ. ರವಿ ಪೂಜಾರಿಗೆ ಭದ್ರತೆ ಒದಗಿಸುವಂತೆ ಮುಂಬೈ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ರವಿ ಪೂಜಾರಿಯನ್ನು 10 ದಿನಗಳ ಕಾಲ ವಶಕ್ಕೆ ನೀಡುವಂತೆ ಮುಂಬೈ ಪೊಲೀಸರು ಬೆಂಗಳೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮಾನ್ಯ ಮಾಡಿದ್ದ ನ್ಯಾಯಾಲಯ ವಶಕ್ಕೆ ನೀಡಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರವಿ ಪೂಜಾರಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದಾನೆ.

- Advertisement -

2019ರ ಜ.19ರಂದು ದಕ್ಷಿಣ ಆಫ್ರಿಕಾದ ಸೆನೆಗಲ್ ನಲ್ಲಿ ರವಿ ಪೂಜಾರಿಯನ್ನು ಬಂಧಿಸಲಾಗಿತ್ತು. ಕರ್ನಾಟಕ ಮತ್ತು ಮುಂಬೈನಲ್ಲಿ ರವಿ ಪೂಜಾರಿ ವಿರುದ್ಧ 120ಕ್ಕೂ ಹೆಚ್ಚು ಪ್ರಕರಣಗಳಿವೆ ಎನ್ನಲಾಗಿದೆ.

- Advertisement -