ರೈಲುಗಳನ್ನು ಆರಂಭಿಸುವುದರಲ್ಲಿರುವ ಉತ್ಸಾಹ ಸುರಕ್ಷತೆ ನೀಡುವುದರಲ್ಲೂ ತೋರಿಸಿ: ಮಲ್ಲಿಕಾರ್ಜುನ ಖರ್ಗೆ

Prasthutha|

- Advertisement -

ನವದೆಹಲಿ: ಆಂಧ್ರಪ್ರದೇಶದಲ್ಲಿ ಸಂಭವಿಸಿದ ರೈಲು ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ರೈಲು ಹಳಿತಪ್ಪಿ ಸಂಭವಿಸಿರುವ ದುರಂತದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ದುರ್ಘಟನೆಯಲ್ಲಿ ಹಲವರು ಜೀವ ಕಳೆದುಕೊಂಡಿದ್ದು, ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪಗಳನ್ನು ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು Xನಲ್ಲಿ ಬರೆದುಕೊಂಡಿರುವ ಖರ್ಗೆ, ರೈಲು ದುರಂತ ಘಟನೆ ಬಳಿಕವೂ ಕೇಂದ್ರ ಸರ್ಕಾರ ಸುರಕ್ಷತೆಯನ್ನು ಗಾಳಿಗೆ ತೂರಿದಂತಿದೆ. ಕೇಂದ್ರ ಸರ್ಕಾರ ಅಬ್ಬರ ಮತ್ತು ಪ್ರಚಾರಗಳೊಂದಿಗೆ ರೈಲುಗಳಿಗೆ ಚಾಲನೆ ನೀಡುವುದರಲ್ಲಿ ತೋರುವ ಉತ್ಸಾಹವನ್ನು ಸುರಕ್ಷತೆ ಒದಗಿಸುವುದರತ್ತಲೂ ತೋರಬೇಕು ಎಂದು ತಿಳಿಸಿದ್ದಾರೆ.

- Advertisement -

ಆಂಧ್ರಪ್ರದೇಶದ ವಿಜಿನಗರಂ ಜಿಲ್ಲೆಯಲ್ಲಿ ನಿನ್ನೆ ನಡೆದ ಎರಡು ರೈಲುಗಳ ನಡುವಿನ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದು, 50 ಜನರು ಗಾಯಗೊಂಡಿದ್ದಾರೆ.



Join Whatsapp