ಈಶ್ವರಪ್ಪ, ಬಿ.ವೈ. ರಾಘವೇಂದ್ರ ವಿರುದ್ಧ ಪ್ರಕರಣ ದಾಖಲಾಗದಿದ್ದರೆ ಕಾಂಗ್ರೆಸ್ ಪ್ರತಿಭಟನೆ: ಐವನ್ ಡಿಸೋಜಾ

Prasthutha|

►ಲೂಟಿ, ಹಲ್ಲೆಗೆ ಒಳಗಾದ ಸಂತ್ರಸ್ತರ ವಿರುದ್ಧವೇ ಪ್ರಕರಣ

- Advertisement -

ಮಂಗಳೂರು: ಬಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆ ನಂತರ ಆದ ಗಲಭೆಯಲ್ಲಿ ಒಂದು ಸಮುದಾಯವನ್ನು ಗುರಿಯಾಗಿಸಲಾಗಿತ್ತು, ಇದೀಗ ಪ್ರಕರಣ ದಾಖಲಿಸುವಲ್ಲೂ ಮತ್ತದೇ ಸಮುದಾಯವನ್ನು ಗುರಿಪಡಿಸಲಾಗುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಆರೋಪಿಸಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐವನ್, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರ್ಷ ಸಾವಿನ ನಂತರ ನಡೆದ ಮೆರವಣಿಗೆ ನೇತೃತ್ವ ವಹಿಸಿದ್ದ ಸಚಿವ ಈಶ್ವರಪ್ಪ ಹಾಗೂ ಸಂಸದ ಬಿವೈ ರಾಘವೇಂದ್ರ ವಿರುದ್ಧ ತಕ್ಷಣವೇ ರಾಜ್ಯ ಸರಕಾರ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.

- Advertisement -

ರಾಜ್ಯದ ಸಚಿವ, ಸಂಸದರೇ ಮೆರವಣಿಗೆ ನೇತೃತ್ವ ವಹಿಸಿದ್ದರು. ಮೆರವಣಿಗೆ ಸಂದರ್ಭ ಅಲ್ಪಸಂಖ್ಯಾತ ಸಮುದಾಯದ ಮನೆ, ಆಸ್ತಿ ಪಾಸ್ತಿಗೆ ಬೆಂಕಿ ಹಚ್ಚಲಾಗಿತ್ತು. ಆದರೆ ಕೇಸ್ ದಾಖಲಿಸುವ ಸಮಯದಲ್ಲಿ ಅಲ್ಪಸಂಖ್ಯಾತರ ಮೇಲಷ್ಟೇ ಕೇಸ್ ದಾಖಲಿಸಿಕೊಳ್ಳಲಾಗಿದೆ. ಆದರೆ ಮೆರವಣಿಗೆ ನೇತೃತ್ವ ವಹಿಸಿದ್ದ ಸಚಿವ, ಸಂಸದರ ಮೇಲೆ ಯಾವುದೇ ಪ್ರಕರಣ ದಾಖಲಿಸಲಾಗಿಲ್ಲ. ದೂರು ನೀಡಲು ಹೋದರೆ ಸ್ವೀಕರಿಸುತ್ತಿಲ್ಲ. ತಕ್ಷಣ ಸರಕಾರ ಈಶ್ವರಪ್ಪ ಹಾಗೂ ಬಿವೈ ರಾಘವೇಂದ್ರ ಅವರ ವಿರುದ್ಧ ಪ್ರಕರಣ ದಾಖಲಿಸದಿದ್ದರೆ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು  ಎಂದು ಎಚ್ಚರಿಸಿದರು.

ಪರಿಹಾರದಲ್ಲಿ ತಾರತಮ್ಯ: ಮೃತ ಹರ್ಷ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಮೊತ್ತ ನೀಡಿರುವ ಸರಕಾರ ಬೆಳ್ತಂಗಡಿಯ ದಲಿತ ವ್ಯಕ್ತಿಯ ಕುಟುಂಬಕ್ಕೆ ಯಾವುದೇ ಪರಿಹಾರ ನೀಡಿಲ್ಲ. ಬಿಜೆಪಿ ಪರಿಹಾರ ವಿತರಣೆಯಲ್ಲಿ ಯಾವ ಮಾನದಂಡ ಪಾಲಿಸುತ್ತದೆ ಎನ್ನುವುದನ್ನು ಹೇಳಲಿ. ಬಿಜೆಪಿ ಕಾರ್ಯಕರ್ತರು ಹೊಡೆದರೆ, ದಲಿತ ಮತ್ತು ಅಲ್ಪಸಂಖ್ಯಾತರು ಮೃತಪಟ್ಟರೆ ಪರಿಹಾರವಿಲ್ಲವೇ ಎಂದು ಪ್ರಶ್ನಿಸಿದರು.

Join Whatsapp