ಯಡಿಯೂರಪ್ಪ ವಿರುದ್ಧವೇ ಹೈಕಮಾಂಡ್ ಗೆ ದೂರು ನೀಡಿದ ಈಶ್ವರಪ್ಪ : ಕಾನೂನು ಮೀರಿ ಸಿಎಂ ಹಸ್ತಕ್ಷೇಪ

Prasthutha|

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಪರೇಶನ್ ಕಮಲವೆಂಬ ಭ್ರಷ್ಟಾಚಾರದ ಕೂಪದ ಮೂಲಕ ಬೀಳಿಸಿ ಅಧಿಕಾರ ವಹಿಸಿಕೊಂಡ ನಂತರ ಬಿಜೆಪಿ ಇದುವರೆಗೂ ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡಲೇ ಇಲ್ಲವೆನ್ನುವುದು ರಾಜ್ಯದ ಜನರಿಗೆ ತಿಲಿದಿರುವ ವಿಚಾರವಾಗಿದೆ. ಪ್ರತಿ ದಿನ ಒಂದಲ್ಲೊಂದು ವಿವಾದಗಳಿಂದ ಮಾತ್ರ ಸುದ್ದಿಯಾಗುವ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯ ವಿರುದ್ಧವೇ ಸರ್ಕಾರದ ಕ್ಯಾಬಿನೆಟ್ ಮಂತ್ರಿ ಈಶ್ವರಪ್ಪ ಪಕ್ಷದ ಹೈಕಮಾಂಡ್ ಗೆ ದೂರು ಸಲ್ಲಿಸಿದ್ದಾರೆ. ಯಡಿಯೂರಪ್ಪನವರು ಕಾನೂನು ಮೀರಿ ನನ್ನ ಇಲಾಖೆಯಲ್ಲಿ ನನ್ನ ಗಮನಕ್ಕೆ ಬರದೆ ಹಲವಾರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಪತ್ರ ಬರೆದಿದ್ದಾರೆ.

- Advertisement -

ನಾನು ಒಂದೂವರೆ ವರ್ಷದಿಂದ ಗ್ರಾಮೀಣಾಭಿವೃದ್ಧಿ ಮಂತ್ರಿಯಾಗಿದ್ದೇನೆ. ಕಾನೂನು ಮೀರಿ ಮುಖ್ಯಮಂತ್ರಿಗಳು ನನ್ನ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪನವರ ವಿರುದ್ಧ ಪ್ರಧಾನಿ ಮೋದಿ, ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ರಾಜ್ಯಾಧ್ಯಕ್ಷ ನಳೀನ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಿಡುಗಡೆಯಾಗಿರುವ 1200 ಕೋಟಿ ರೂಪಾಯಿಗಳಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ನನ್ನ ಗಮನಕ್ಕೆ ತಾರದೇ ಆರ್ ಡಿ ಪಿ ಆರ್ ಇಲಾಖೆಯ ಅನುದಾನವನ್ನು ನೇರವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಹಂಚಿದ್ದಾರೆ. ರಾಜ್ಯಪಾಲರನ್ನು ಭೇಟಿ ಮಾಡಿ ದೂರು ಸಲ್ಲಿಸುವುದಾಗಿಯೂ ಹೇಳಿದ್ದಾರೆ. ಕ್ಯಾಬಿನೆಟ್ ದರ್ಜೆಯ ಮಂತ್ರಿಯೊಬ್ಬರು ಮುಖ್ಯಮಂತ್ರಿಯ ವಿರುದ್ಧವೇ ದೂರು ಸಲ್ಲಿಸಿರುವುದರಿಂದ ಬಿಜೆಪಿಗೆ ತೀವ್ರ ಮುಖಭಂಗವಾದಂತಾಗಿದೆ

Join Whatsapp