ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕರ ನೇಮಕ ಮಾಡಲಿ: ಈಶ್ವರಪ್ಪ ಒತ್ತಾಯ

Prasthutha|

ಶಿವಮೊಗ್ಗ: ಅದಷ್ಟು ಬೇಗ ಪಕ್ಷದ ರಾಜ್ಯಾಧ್ಯಕ್ಷರನ್ನು ಹಾಗೂ ವಿರೋಧ ಪಕ್ಷದ ನಾಯಕರನ್ನು ನೇಮಕ ಮಾಡಲಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ಕೇಂದ್ರದ ನಾಯಕರಿಗೆ ಒತ್ತಾಯಿಸಿದ್ದಾರೆ.

- Advertisement -


ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯದ ಬಿಜೆಪಿಯ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿದೆ.

ನಮ್ಮ ಕಾರ್ಯಕರ್ತರು ಕೂಡ ಕೇಳುತ್ತಿದ್ದಾರೆ. ಕಾಂಗ್ರೆಸ್ನವರು ಇದೇ ವಿಚಾರದಲ್ಲಿ ನಮ್ಮನ್ನು ಟೀಕಿಸುತ್ತಿದ್ದಾರೆ. ಸದನದಲ್ಲಿ ಲೇವಡಿ ಮಾಡುತ್ತಿದ್ದಾರೆ. ಕೇಂದ್ರದ ಬಿಜೆಪಿ ನಾಯಕರು ಸಹ ರಾಜ್ಯದ ಬೆಳವಣಿಗೆಯನ್ನು ಗಮನಿಸುತ್ತಿದ್ದಾರೆ. ಆದಷ್ಟು ಬೇಗ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ ಎಂದರು.

Join Whatsapp