ಕಲಬುರಗಿ: ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪನವರ ರಾಜಕೀಯ ಜೀವನ ಮುಗಿದುಹೋಗಿದೆ, ಬಿಜೆಪಿಯಲ್ಲಿ ಆಟಕ್ಕುಂಟು ಲೆಕ್ಕಕ್ಕಿಲದಂಥ ಸ್ಥಿತಿಯಲ್ಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಗೇಲಿ ಮಾಡಿದರು.
ಕಲಬುರಗಿಯಲ್ಲಿ ಮಾತಾಡಿದ ಅವರು, ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕೆಂದು ಈಶ್ವರಪ್ಪ ಹೇಳಿರುವುದಕ್ಕೆ ಪ್ರತಿಕ್ರಿಯಿಸುತ್ತಾ ಅಂಥ ಕಾನೂನು ಏನಾದರೂ ತಂದರೆ ಅರ್ಧ ಬಿಜೆಪಿ ಖಾಲಿಯಾಗುತ್ತದೆ ಮತ್ತು ಆರ್ ಎಸ್ ಎಸ್ ಬಾಗಿಲು ಹಾಕಬೇಕಾಗುತ್ತದೆ ಎಂದರು.
ಪಕ್ಷವೇ ಈಶ್ವರಪ್ಪಗೆ ಬಲವಂತದ ನಿವೃತ್ತಿ ನೀಡಿ ಮನೆಯಲ್ಲಿರಲು ಹೇಳಿದಾಗ್ಯೂ ಅವರು ತಾನಿನ್ನೂ ಅಸ್ತಿತ್ವದಲ್ಲಿದ್ದೇನೆ ಅಂತ ತೋರಿಸಲು ಇಂಥ ಹೇಳಿಕೆಗಳನ್ನು ನೀಡುತ್ತಾರೆ ಎಂದು ಖರ್ಗೆ ಹೇಳಿದರು.