Home ಟಾಪ್ ಸುದ್ದಿಗಳು ಪ್ರಧಾನಿ ಮೋದಿ ಭಾವಚಿತ್ರಕ್ಕಾಗಿ ಫೈಟ್: ಕೋರ್ಟ್ ಮೊರೆ ಹೋದ ಈಶ್ವರಪ್ಪ

ಪ್ರಧಾನಿ ಮೋದಿ ಭಾವಚಿತ್ರಕ್ಕಾಗಿ ಫೈಟ್: ಕೋರ್ಟ್ ಮೊರೆ ಹೋದ ಈಶ್ವರಪ್ಪ

ಶಿವಮೊಗ್ಗ: ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.


ಈ ಮಧ್ಯೆ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಸುವ ವಿಚಾರವಾಗಿ ವಾಕ್ಸಮರ ಆರಂಭಗೊಂಡಿದ್ದು, ಇದೀಗ ಕೋರ್ಟ್ ಮೆಟ್ಟಿಲೇರಿದೆ.


ಮೋದಿ ಫೋಟೋ ಬಳಕೆ ವಿಚಾರವಾಗಿ ಶಿವಮೊಗ್ಗ ಕೋರ್ಟ್ನಲ್ಲಿ ಈಶ್ವರಪ್ಪ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ. ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಸಿದ್ದಕ್ಕೆ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವ್ಯಂಗ್ಯವಾಡಿದ್ದರು. ರಾಘವೇಂದ್ರಗೆ ತಿರುಗೇಟು ನೀಡಿದ್ದ ಈಶ್ವರಪ್ಪ, ಮೋದಿ ಅವರಪ್ಪನ ಆಸ್ತಿಯಾ ಎಂದು ಕೌಂಟರ್ ಕೊಟ್ಟಿದ್ದರು. ಇದೀಗ ಮೋದಿ ಫೋಟೋಗಾಗಿ ಕೋರ್ಟ್ ಮೊರೆಹೋಗಿದ್ದಾರೆ.

Join Whatsapp
Exit mobile version