ಸಂತೋಷ್ ಆತ್ಮಹತ್ಯೆ: ಇಂದೇ ಸಚಿವ ಈಶ್ವರಪ್ಪ ರಾಜೀನಾಮೆ ?

Prasthutha|

ಮಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಇಂದೇ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -

ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಖಾಸಗಿ ಲಾಡ್ಜೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಸಾವಿಗೆ ಸಚಿವ ಈಶ್ವರಪ್ಪನವರೇ ಕಾರಣ ಎಂದು ಸಂತೋಷ್ ಪಾಟೀಲ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.

Join Whatsapp
Exit mobile version