Home ಟಾಪ್ ಸುದ್ದಿಗಳು ಪಾರ್ಲಿಮೆಂಟ್ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ: ಈಶ್ವರಪ್ಪ

ಪಾರ್ಲಿಮೆಂಟ್ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ: ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್‌ ನ ಅರ್ಧ ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಾರೆ ಅಂತಿದ್ದಾರೆ. ಬಿಜೆಪಿಯ ಒಬ್ಬನೇ ಒಬ್ಬ ಶಾಸಕ ಕಾಂಗ್ರೆಸ್‌ಗೆ ಹೋಗಿಲ್ಲ. ಪಾರ್ಲಿಮೆಂಟ್ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್‌ನ 17 ಜನ ಶಾಸಕರು ಅಲ್ಲಿ ಸಮಾಧಾನ ಇಲ್ಲ ಎಂದು ನಮ್ಮ ಪಕ್ಷಕ್ಕೆ ಬಂದರು. ಈಗಲೂ ಕೆಲವು ಶಾಸಕರು ಸರ್ಕಾರದ ಬಗ್ಗೆ ಅಸಮಾಧಾನ ಇದೆ ಎನ್ನುತ್ತಾರೆ. ಈ ಬಗ್ಗೆ ಸ್ವತಃ ಡಿಸಿಎಂ ಡಿಕೆಶಿ ಅವರು ಅಸಮಾಧಾನ ಇದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ ಎಂದರು.

Join Whatsapp
Exit mobile version