ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಸ್ ಈಶ್ವರಪ್ಪರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿದೆ.
ಈ ಬಗ್ಗೆ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಎಲ್ಲ ರಾಜ್ಯಗಳ ಬಿಜೆಪಿ ಘಟಕಗಳಲ್ಲಂತೆ ರಾಜ್ಯ ಬಿಜೆಪಿ ಘಟಕದಲ್ಲೂ ಒಂದು ಶಿಸ್ತು ಸಮಿತಿ ಇದೆ. ತಮ್ಮಿಂದಾಗಿತ್ತಿರುವ ಪ್ರಮಾದಗಳನ್ನು ತಿದ್ದಿಕೊಳ್ಳಲು ಈಶ್ವರಪ್ಪನವರಿಗೆ ಸಾಕಷ್ಟು ಸಮಯಾವಕಾಶ ನೀಡಲಾಗಿತ್ತು. ಆದರೆ ಅವರು ತಮ್ಮ ಧೋರಣೆಗಳನ್ನು ಬದಲಿಸಲಿಲ್ಲ ಎಂದು ಹೇಳಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಬಗ್ಗೆ ಭವಿಷ್ಯವಾಣಿ ನುಡಿದ ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಕನಿಷ್ಠ ಮೂರು ಲಕ್ಷ ವೋಟುಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದರು.