ಸಾವಿರಾರು ಜನರೊಂದಿಗೆ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಿದ ಈಶ್ವರಪ್ಪ

Prasthutha|

ಶಿವಮೊಗ್ಗ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನವೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆಎಸ್​ ಈಶ್ವರಪ್ಪ ನಾಮಪತ್ರ ಸಲ್ಲಿಸಿದ್ದಾರೆ. ಅವರು ನಾಮಪತ್ರ ಸಲ್ಲಿಸಲು ಬಂದಿದ್ದರು.

- Advertisement -

ಸಾವಿರಾರು ಬೆಂಬಲಿಗರೊಂದಿಗೆ ಶಿವಮೊಗ್ಗದ ರಾಮಣ್ಣಶ್ರೇಷ್ಟಿ ಪಾರ್ಕ್ ನಿಂದ ಮೆರವಣಿಗೆ ಮೂಲಕ ಗೋಪಿ ಸರ್ಕಲ್‌ವರೆಗೂ ತೆರಳಿದ ಬಳಿಕ ನಾಮಪತ್ರ ಸಲ್ಲಿಸಿಸಿದರು. ಈ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಕೆ ಎಸ್ ಈಶ್ವರಪ್ಪ ಪತ್ನಿ ವಿಜಯಲಕ್ಷ್ಮಿ, ಪುತ್ರ ಕಾಂತೇಶ್​ ಹಾಗೂ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಮತ್ತು ಆಪ್ತರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ನಾಮಪತ್ರ ಸ್ವೀಕರಿಸಿದರು.

- Advertisement -

ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಈಶ್ವರಪ್ಪ, ಇಂದು ಶಿವಮೊಗ್ಗ ಲೋಕಸಭಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ನನಗೆ ಬೆಂಬಲ ಸೂಚಿಸಲು 8 ಕ್ಷೇತ್ರದ ಜನರು ಇಲ್ಲಿಗೆ ಬಂದಿದ್ದಾರೆ. ಮನೆ ಮನೆಗೆ ಕಾರ್ಯಕರ್ತರು ಹೋಗಿ ಹಿಂದುತ್ವಕ್ಕೆ ಅನ್ಯಾಯ ಆಗಿರುವ ಅಂಶ ಹೇಳುತ್ತಿದ್ದಾರೆ. ಶಿವಮೊಗ್ಗದ ಜನ ನನಗೆ ಬೆಂಬಲ ಕೋಡ್ತಾರೆ ಎನ್ನುವ ವಿಶ್ವಾಸವಿದೆ. ಈಗಾಗಲೆ ನಾಮಪತ್ರ ಸಲ್ಲಿಸುವ ವೇಳೆ 25 ಸಾವಿರ ಜನ ಬಂದು ಬೆಂಬಲ ಸೂಚಿಸಿದ್ದಾರೆ. ನಾಮಪತ್ರ ಸಲ್ಲಿಸಲ್ಲ ಎಂದವರಿಗೆ ಮೆರವಣಿಗೆಯೇ ಉತ್ತರ ಎಂದು ತಿಳಿಸಿದರು.

2ನೇ ಹಂತದ ಚುನಾವಣೆಗೆ ನಾಮ ಪತ್ರ ಸಲ್ಲಿಸಲು ಇಂದಿನಿಂದ 19 ರವರೆಗೆ ಅವಕಾಶ ನೀಡಲಾಗಿದೆ.

Join Whatsapp
Exit mobile version