ವಲಸಿಗರಿಂದ ಬಿಜೆಪಿಯಲ್ಲಿ ಅಶಿಸ್ತು ಇದೆ ಎಂದು ನಾನು ಹೇಳಿಲ್ಲ: ಮಾಜಿ ಸಚಿವ ಈಶ್ವರಪ್ಪ

Prasthutha|


ಬೆಂಗಳೂರು: ಕಾಂಗ್ರೆಸ್‌ ನಿಂದ ವಲಸೆ ಬಂದವರಿಂದ ಬಿಜೆಪಿಯಲ್ಲಿ ಶಿಸ್ತು ಹಾಳಾಯಿತು ಎಂದು ನಾನು ಎಲ್ಲಿಯೂ ಹೇಳಿಲ್ಲ. ಆದರೆ ವಾಹಿನಿಯೊಂದು ಹಾಗೆ ಸುಳ್ಳು ಸುದ್ದಿ ಬಿತ್ತರಿಸಿದ್ದರಿಂದ ಗೊಂದಲ ಸೃಷ್ಟಿಯಾಗಿದೆ ಎಂದು ಮಾಜಿ ಸಚಿವ ಈಶ್ವರಪ್ಪ ಸ್ಪಷ್ಟನೆಯನ್ನ ನೀಡಿದ್ದಾರೆ.

- Advertisement -

ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ಮಾಜಿ ಸಚಿವರು, ಹುಬ್ಬಳ್ಳಿಯಲ್ಲಿ ನಾನು ಆ ರೀತಿ ಹೇಳಿಕೆ ನೀಡಿದ್ದೇನೆ ಎಂಬ ಸುದ್ದಿಯನ್ನ ಸುದ್ದಿ ವಾಹಿನಿಯೊಂದು ಮೊದಲು ಪ್ರಸಾರ ಮಾಡಿತ್ತು. ಆ ಬಗ್ಗೆ ಸಂಬಂಧಿಸಿದ ಮಾಧ್ಯಮದ ವರದಿಗಾರರಿಗೆ ಈ ಬಗ್ಗೆ ಪ್ರಶ್ನಿಸಿದ್ದೆ. ಆಗ ಅದಕ್ಕೆ ಆತ ನಾನು ಆ ರೀತಿಯ ಸುದ್ದಿಯನ್ನ ಕಳಿಸಿಯೇ ಇಲ್ಲ. ಆದರೂ ಬೆಂಗಳೂರಿನಿಂದ ಹಾಗೆ ಸುದ್ದಿ ಬಿತ್ತರಿಸುತ್ತಿದ್ದಾರೆ ಎಂದಿದ್ದ. ಆ ಬಗ್ಗೆ ನಾನು ಸ್ಪಷ್ಟನೆ ಕೊಟ್ಟಿದ್ದರೂ, ಆ ಸುದ್ದಿ ವಾಹಿನಿ ನನ್ನ ಸ್ಪಷ್ಟನೆಯನ್ನ ಪ್ರಕಟಿಸಿರಲಿಲ್ಲ’ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿಕೆಯನ್ನ ನೀಡಿದ್ದಾರೆ.



Join Whatsapp