ಶಿವಮೊಗ್ಗ: ಹಾಸನ ಸಂಸದ ಪ್ರಜ್ವಲ್ ಕಾಮಕಾಂಡ ಬಹಿರಂಗಗೊಂಡು ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಬಿಜೆಪಿಯ ಹಿರಿಯ ಮುಖಂಡ, ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಏಪ್ರಿಲ್ 27ರಂದು ತಮ್ಮ ಬಗ್ಗೆ ಮಾನಹಾನಿಕರ ಸುದ್ದಿ, ಫೋಟೋ ಪ್ರಕಟಿಸದಂತೆ ಕೋರ್ಟಿನಿಂದ ತಡೆಯಾಜ್ಞೆ ತಂದಿರುವ ಮಾಹಿತಿ ಸಿಕ್ಕಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಬಹಿರಂಗಗೊಂಡು ತೀವ್ರ ಆಕ್ರೋಶ ಹುಟ್ಟು ಹಾಕುತ್ತಿರುವುದರ ಮಧ್ಯೆಯೇ ಶಿವಮೊಗ್ಗದ ಬಿಜೆಪಿ ಬಂಡಾಯ ಅಭ್ಯರ್ಥಿಈಶ್ವರಪ್ಪರ ಮಗ ಕಾಂತೇಶ್ ತನ್ನ ಮಾನ ಹಾನಿಕರ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದಿರುವುದು ಅನುಮಾನ ಹುಟ್ಟುಹಾಕಿದೆ. ಅಶ್ಲೀಲ ಸಿಡಿ ಭೀತಿ ಹಿನ್ನೆಲೆಯಲ್ಲಿ ಈ ತಡೆಯಾಜ್ಞೆ ತಂದಿದ್ದಾರೆ ಎನ್ನಲಾಗುತ್ತಿದೆ.
ಕಾಂತೇಶ್ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ಸಿಸಿಎಚ್ 11ನೇ ನ್ಯಾಯಾಲಯ ಇಂಟರ್ನೆಟ್, ಫೇಸ್‌ಬುಕ್, ವಾಟ್ಸ್ಯಾಪ್, ಯೂಟ್ಯೂಬ್ ಚಾನಲ್ ಸೇರಿದಂತೆ ಎಲ್ಲಾ ಮುದ್ರಣ, ದೃಶ್ಯ ಹಾಗೂ ಸಾಮಾಜಿಕ ಮಾಧ್ಯಮಗಳ ವಿರುದ್ಧ ನಿರ್ಬಂಧ ಆದೇಶ ನೀಡಿದೆ.